Advertisement
ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದಲ್ಲಿ ಗೋಹತ್ಯೆ ನಿಷೇಧದ ನಡುವೆ ಅಕ್ರಮ ಗೋವುಗಳ ಸಾಗಣೆ ನಡೆಯುತ್ತಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಕಿಡಿಕಾರಿದರು. ಗೋವು ಕೇವಲ ನಮ್ಮ ಸಂಸ್ಕ್ರತಿಯ ಭಾಗವಲ್ಲ ರೈತನ ಜೀವನಾಧಾರ, ಪರಿಸರ ವ್ಯವಸ್ಥೆಯಲ್ಲಿ, ಮಾನವನ ಜೀವನದಲ್ಲಿ ಗೋವಿನ ಪಾತ್ರ ಬಹುದೊಡ್ಡದಿದೆ, ಗೋ ಸಂರಕ್ಷಣೆ ಜವಾಬ್ದಾರಿಯಿಂದ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
Related Articles
Advertisement
ಜಿಲ್ಲೆಗೊಂದು ಗೋಶಾಲೆ ಪ್ರಗತಿ
ರಾಜ್ಯದಲ್ಲಿ ಗೋಹತ್ಯೆ ನೀಷೇಧ ಜಾರಿಯಾದ ನಂತರ ಗೋವುಗಳ ಸಂರಕ್ಷಣೆಗೆ ಇಲಾಖೆ ಬದ್ಧವಾಗಿದ್ದು ಜಿಲ್ಲೆಗೊಂದು ಗೋಶಾಲೆ ತೆರೆಯಲು ಇಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಗೋಮಾಳವನ್ನು ಇಲಾಖೆಗೆ ಪಡೆಯುವ ಕಾರ್ಯ ಜಿಲ್ಲೆಗಳಲ್ಲಿ ನಡೆದಿದ್ದು ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ಮಾಡಿ ಗೋಶಾಲೆಯ ಉದ್ಘಾಟನೆ ಮಾಡಲಾಗುವುದು. ಸದ್ಯ ಕೆಲವು ಜಿಲ್ಲೆಗಳಲ್ಲಿ ಗೋಶಾಲೆಗಳ ಜಮೀನಿನ ಹಸ್ತಾಂತರ ಬಾಕಿ ಇದ್ದು ಇಲಾಖೆಯ ಕಾರ್ಯದರ್ಶೀ ,ಆಯುಕ್ತರು ಹಾಗೂ ಉಪನಿರ್ದೇಶಕರ ಹೆಚ್ಚು ವೇಗದಲ್ಲಿ ಗೋಶಾಲೆ ತೆರೆಯುವ ಕಾರ್ಯ ಪೂರ್ಣಗೊಳಿಸಿ ಎಂದರು.
ಇಲಾಖೆಯ ಎಲ್ಲ ಯೋಜನೆಗಳ ಅರಿವು ಅಧಿಕಾರಿಗಳಿಗೆ ಇರಲಿ
ಪಶುಸಂಗೋಪನೆ ಇಲಾಖೆಯ ಎಲ್ಲ ಯೋಜನೆಗಳು ಅಧಿಕಾರಿಗಳು ಜನಸಾಮಾನ್ಯರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಇದಕ್ಕೂ ಮೊದಲು ಅಧಿಕಾರಿಗಳಿಗೆ ಯೋಜನೆಗಳ ಸಮರ್ಪಕವಾದ ಮಾಹಿತಿ ಇರಬೇಕು ಇಲ್ಲವಾದಲ್ಲಿ ಯೋಜನೆ ಅನುಷ್ಠಾನದಲ್ಲಿ ಹಿನ್ನಡೆ ಆಗುತ್ತದೆ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅನುಗ್ರಹ ಪರಿಹಾರ ವಿಳಂಬಕ್ಕೆ ಸಚಿವರ ಅಸಮಾಧಾನಅನುಗ್ರಹ ಯೋಜನೆಯ ಹಣ ಬಿಡುಗಡೆಯಾದರು ಅಧಿಕಾರಿಗಳ ನಿರ್ಲಕ್ಷದಿಂದ ಫಲಾನುಭವಿಗಳಿಗೆ ಪರಿಹಾರ ದೊರಕದಿರುವುದಕ್ಕೆ ಎಲ್ಲ ಜಿಲ್ಲೆಯ ಜನಪ್ರತಿನಿಧಿಗಳ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಸಚಿವರು ಅಧಿಕಾರಿಗಳ ಮೇಲೆ ಕೆಂಡಾಮಂಡಲರಾದರು. ಅನುಗ್ರಹ ಯೋಜನೆಗೆ ಈಗಾಗಲೇ ಒಟ್ಟು ರೂ. 39 ಕೋಟಿ ಬಿಡುಗಡೆ ಆಗಿದ್ದು,ರಾಜ್ಯದ ಎಲ್ಲ ಫಲಾನುಭವಿಗಳಿಗೆ ಶೀಘ್ರವಾಗಿ ಪರಿಹಾರ ತಲುಪುವಂತೆ ನೋಡಿಕೊಳ್ಳಿ ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಸಿದರು. ಸದ್ಯ ರೂ.25 ಕೋಟಿ ಡಿಬಿಟಿ ಮೂಲಕ ಫಲಾನುಭವಿಗಳಿಗೆ ನೀಡಲಾಗಿದ್ದು ಬಾಕಿ ಉಳಿದ ರೂ.೧೫ ಕೋಟಿ ಪರಿಹಾರವನ್ನು ಶೀಘ್ರದಲ್ಲಿ ನೀಡಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.