Advertisement

ಅಧಿಕಾರಿಗಳ ದಾಳಿ: ಆರು ಬಾಲ ಕಾರ್ಮಿಕರು ವಶಕ್ಕೆ

05:37 PM Sep 02, 2017 | Team Udayavani |

ಕೆಂಭಾವಿ: ಬಾಲಕರನ್ನು ವಿವಿಧ ರೀತಿಯಲ್ಲಿ ದುಡಿಸಿಕೊಳ್ಳುವುದು ಮಹಾ ಅಪರಾಧವಾಗಿದ್ದು, ಬಾಲಕರನ್ನು
ದುಡಿಸಿಕೊಂಡಿದ್ದು ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ ಠಾಕೂರ ಹೇಳಿದರು.

Advertisement

ಪಟ್ಟಣದಲ್ಲಿ ಶುಕ್ರವಾರ ಜಿಲ್ಲಾ ಬಾಲ ಕಾರ್ಮಿಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ
ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಗುಟಖಾ, ತಂಬಾಕು, ಸಿಗರೇಟ್‌ ಸೇರಿದಂತೆ ಹಲವು ತಂಬಾಕು ಉತ್ಪನ್ನಗಳನ್ನು ಪತ್ತೆ ಹಚ್ಚಿ ಹಾಗೂ ಆರು ಜನ ಬಾಲ ಕಾರ್ಮಿಕರನ್ನು ವಶಕ್ಕೆ ಪಡೆದು ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಲವು ಮಕ್ಕಳು ಶಾಲೆ ತೊರೆದು ವಿವಿಧ ಅಂಗಡಿ, ಗ್ಯಾರೇಜಗಳಲ್ಲಿ ಕೆಲಸ ಮಾಡುತ್ತಿರುವುದು ಕಂಡು ಬಂದಿದ್ದು, ಆ ಎಲ್ಲ ಮಕ್ಕಳನ್ನು ರಕ್ಷಸಿ ಪಾಲಕರ ವಶಕ್ಕೆ ಒಪ್ಪಿಸಿ ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ಧ
ಕೇಸ್‌ ದಾಖಲಿಸಲಾಗುವುದು ಎಂದರು. ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದ್ದು, ತಮ್ಮ
ಮಕ್ಕಳನ್ನು ಕೆಲಸಕ್ಕೆ ಕಳಿಸದೆ ಶಾಲೆಗೆ ಕಳಿಸಿ ವಿದ್ಯಾವಂತರನ್ನಾಗಿ ಮಾಡುವಂತೆ ಪಾಲಕರಲ್ಲಿ ಮನವಿ ಮಾಡಿದರು.

ನಂತರ ಪತ್ತೆ ಹಚ್ಚಿದ ಮಕ್ಕಳನ್ನು ಪಾಲಕರಿಗೆ ಒಪ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಪಾನಶಾಪ್‌, ಬಾರ್‌, ಕಿರಾಣಿ ಅಂಗಡಿ, ಹೋಟೆಲ್‌ ಸೇರಿದಂತೆ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿದ ತಂಡ ಹಲವು ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು 15 ವಿವಿಧ ಪ್ರಕರಣಗಳನ್ನು ದಾಖಲಿಸಿ ರೂ. 2200 ದಂಡ ವಿಧಿಸಿದರು.

ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಮಹಾಲಕ್ಷ್ಮೀ ಸಜ್ಜನ, ಕಾರ್ಮಿಕ ನಿರೀಕ್ಷಕ ಗಂಗಾಧರ ನಾಯಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಶರಥ ನಾಯಕ, ಸಿಆರ್‌ಸಿ ಬಸನಗೌಡ, ಪೊಲೀಸ್‌ ಪೇದೆ ಸಂಗಮೇಶ, ಹೋಮ್‌ ಗಾರ್ಡ್‌ ಮುರ್ತುಜಾ ತಂಡದಲ್ಲಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next