Advertisement
ಪ್ರಸಕ್ತ ಸಾಲಿನ ಈವರೆಗೆ 302 ಗರ್ಭಪಾತ ಪ್ರಕರಣಗಳಾಗಿವೆ. ಅವುಗಳಲ್ಲಿ 84 ಸ್ವಾಭಾವಿಕ ಗರ್ಭಪಾತವಾಗಿವೆ. ಕಾನೂನು ಬಾಹಿರವಾಗಿ ವೈದ್ಯರ ಸಲಹೆಗಳಿಲ್ಲದೆ ಭ್ರೂಣ ಪತ್ತೆಗಳು ನಡೆಯುತ್ತಿರುವ ಬಗ್ಗೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
Related Articles
Advertisement
ತಂಬಾಕು ಉತ್ಪನ್ನಗಳನ್ನು ಶಾಲಾ- ಕಾಲೇಜುಗಳ ಸುತ್ತ 100 ಮೀ. ವ್ಯಾಪ್ತಿಯಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂಗಡಿಗಳ ಲೈಸೆನ್ಸ್ ರದ್ದುಪಡಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಿದರು.
ಹೆರಿಗೆ ಸಂದರ್ಭದ ಸಾವು ತಡೆಯಿರಿಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ 3 ತಾಯಿ-ಮರಣ ಪ್ರಕರಣಗಳಾಗಿವೆ. ಅವುಗಳಲ್ಲಿ 2 ಹೊರಜಿಲ್ಲೆಗಳ ಪ್ರಕರಣಗಳಿವೆ. ಬಾಣಂತಿಯರಿಗೆ ಪ್ರಾರಂಭದಿಂದಲೇ ತಾಯಿ ಕಾರ್ಡ್‌ಗಳನ್ನು ವಿತರಿಸಿ, ನಿರಂತರ ಆರೋಗ್ಯ ತಪಾಸಣೆ ಮಾಡಬೇಕು. ಹೆರಿಗೆ ಸಂದರ್ಭದಲ್ಲಿ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಹಾಗೂ ತಾಯಿ ಮರಣ ಸಂಭವಿಸದಂತೆ ಎಚ್ಚರವಹಿಸಬೇಕು ಎಂದು ಹೇಳಿದರು. ಎಂಡೋಸಲ್ಫಾನ್ ಬಾಧಿತರ ಆರೋಗ್ಯ ಸುದಾರಣೆ ಹಾಗೂ ಪುನರ್ವಸತಿ ಕಾರ್ಯ ಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು. ಅವರಿಗೆ ಮಾಸಾಶನ ನಿಗದಿತ ಅವಧಿಯಲ್ಲಿ ಪಾವತಿ ಆಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಬೈಂದೂರಿನ ನಾಡ ಗ್ರಾ.ಪಂ.ನ ಸೇನಾಪುರ ಗ್ರಾಮದಲ್ಲಿ ಶಾಶ್ವತ ಪುನರ್ವಸತಿ ಕೇಂದ್ರ ನಿರ್ಮಾಣಕ್ಕಾಗಿ ಕ್ರಮ ಕೈಗೊಳ್ಳಬೇಕು ಎಂದರು. ನಾಯಿ ಕಡಿತ ಬಗ್ಗೆ ಎಚ್ಚರ
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಪ್ರಸ್ತುತ ಸಾಲಿನಲ್ಲಿ 7,536 ನಾಯಿ ಕಡಿತ ಪ್ರಕರಣಗಳು, 151 ಹಾವು ಕಡಿತ ಪ್ರಕರಣ ಗಳಾಗಿವೆ. ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಯನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಮಣಿಪಾಲ ವ್ಯಾಪ್ತಿಯಲ್ಲಿ ಹೆಚ್ಚು ನಾಯಿ ಕಡಿತ ಪ್ರಕರಣಗಳಾಗಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು. ಕ್ಷಯ ಮುಕ್ತ ಗ್ರಾಮ ರೂಪಿಸಿ
ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಮಾತನಾಡಿ, ಕ್ಷಯ ಮುಕ್ತ ಭಾರತ ಅಭಿಯಾನ ನಡೆಯುತ್ತಿದ್ದು, ಗ್ರಾ.ಪಂ. ವ್ಯಾಪ್ತಿಯಲ್ಲಿ ಕ್ಷಯ ರೋಗಿಗಳನ್ನು ದತ್ತು ಪಡೆಯಲು ದಾನಿಗಳನ್ನು ಪ್ರೋತ್ಸಾಹಿಸಿ, ಕ್ಷಯರೋಗಿಗಳಿಗೆ ಚಿಕಿತ್ಸೆ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸಿ ಕ್ಷಯ ಮುಕ್ತ ಗ್ರಾಮ ರೂಪಿಸಬೇಕು ಎಂದರು. ಜಿಲ್ಲೆಯಲ್ಲಿ 29,107 ಯೂನಿಟ್‌ಗಳಷ್ಟು ರಕ್ತ ಸಂಗ್ರಹವಾಗಿರುತ್ತದೆ. ರಕ್ತ ನಿಧಿ ಕೇಂದ್ರಗಳನ್ನು ಸ್ಥಾಪಿಸಲು ಮುಂದಾದಲ್ಲಿ ಅವುಗಳಿಗೆ ನಿಯಮಾನುಸಾರ ಅನುಮತಿ ನೀಡಬೇಕು. ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾಂಪೌಂಡ್, ಉದ್ಯಾನವನವನ್ನು ನರೇಗಾ ದಡಿ ಕೈಗೊಳ್ಳಲು ಹಾಗೂ ಕಟ್ಟಡದ ಇತರ ಅನುದಾನದಲ್ಲಿ ಅಭಿವೃದ್ಧಿಪಡಿಸಲು ಅವಕಾಶವಿದೆ ಎಂದರು. ಡಿಎಚ್‌ಒ ಡಾ| ಐ.ಪಿ ಗಡಾದ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.