ಬ್ರಹ್ಮಾವರ: ಜನಸಂಪರ್ಕ ಸಭೆಯ ಮೂಲಕ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳನ್ನು ಜನರ ಬಳಿಗೆ ಕರೆತಂದು ಅವರ ಸಮಸ್ಯೆ ಗಳನ್ನು ಸ್ಥಳದಲ್ಲೇ ಪರಿಹಾರ ಮಾಡಲಾಗುತ್ತಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.
ಅವರು ಸೋಮವಾರ ಆಮ್ರಕಲ್ಲು ಮಲ್ಲಿಕಾರ್ಜುನ ಸಭಾಭವನದಲ್ಲಿ ನಡೆದ ನಂಚಾರು ಗ್ರಾಮ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ನಂಚಾರು ಗ್ರಾಮ ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದೆ ಕ್ಷೇತ್ರದ ಅಭಿವೃದ್ಧಿಯ ಸಂದರ್ಭ ಈ ಗ್ರಾಮಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ ಎಂದರು.
ಈ ಸಂದರ್ಭ ಜನರ ಸಮಸ್ಯೆ ಗಳಿಗೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕಾರಣ ಕೇಳಿ ಸಲಹೆ, ಸೂಚನೆಗಳನ್ನು ನೀಡಿದರು ಹಾಗೂ ಕೆಲ ವೊಂದು ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸಿದರು. ಗ್ರಾಮಸ್ಥರು ಅಭಿ ವೃದ್ಧಿ ಕಾಮಗಾರಿಗಳ ಕುರಿತು ಸಚಿವರಿಗೆ ಮನವಿ ಸಲ್ಲಿಸಿದರು.
ಬ್ರಹ್ಮಾವರ ವಿಶೇಷ ತಹಶೀಲ್ದಾರ ಪ್ರದೀಪ್ ಕುಡೇìಕರ್, ಜಿ.ಪಂ. ಸದಸ್ಯ ಮೈರ್ಮಾಡಿ ಸುಧಾಕರ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಹಾರಾಡಿ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ತಾರಾನಾಥ ಶೆಟ್ಟಿ, ಉದ್ಯೋಗ ಖಾತ್ರಿ ಇಲಾಖೆಯ ಉಡುಪಿ ಸಹಾಯಕ ನಿರ್ದೇಶಕ ಹರಿಕೃಷ್ಣ, ಗ್ರಾ. ಪಂ. ಸದಸ್ಯೆ ಪಾರ್ವತಿ ಬಾೖ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುಧಾಕರ ನಾಯ್ಕ ಕಾರ್ಯ ಕ್ರಮ ನಿರೂಪಿಸಿದರು.