Advertisement

ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ವಿಫ‌ಲ

12:51 PM Sep 13, 2018 | |

ಮಹದೇವಪುರ: ಅಧಿಕಾರಿಗಳ ಬೇಜವಾಬ್ದಾರಿ ಕಾರ್ಯನಿರ್ವಹಣೆಯಿಂದಾಗಿ ಸರ್ಕಾರದ ಸೌಲಭ್ಯಗಳು ಅರ್ಹ ಪಲಾನುಭವಿಗಳನ್ನು ತಲುಪುತ್ತಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ನಾರಾಯಣಸ್ವಾಮಿ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

Advertisement

ಕ್ಷೇತ್ರದ ಕನ್ನಮಂಗಲ ಗ್ರಾ.ಪಂನಲ್ಲಿ ನಡೆದ ಗ್ರಾಮ ಸಭೆಯಲ್ಲಿ ವಿವಿಧ ಫಲಾನುಭವಿಗಳಿಗೆ ವಿವಿಧ ಸೌಲಭ್ಯ ವಿತರಿಸಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವ ಉದ್ದೇಶದಿಂದ ಆಯೋಜಿಸುವ ಗ್ರಾಮ ಸಭೆಯಲ್ಲಿ 29 ಇಲಾಖೆಗಳ ಅಧಿಕಾರಿಗಳು ಹಾಜರಿದ್ದು ತಮ್ಮ ಇಲಾಖೆಯಿಂದ ನೀಡುವ ಸೌಲಭ್ಯಗಳ ಕುರಿತು ಜನತೆಗೆ ಮಾಹಿತಿ ನೀಡಬೇಕು. ಆದರೆ, ಬೆರಳೆಣಿಕೆ ಅಧಿಕಾರಿಗಳು ಮಾತ್ರ ಗ್ರಾಮ ಸಭೆಗೆ ಹಾಜರಾಗುತ್ತಿದ್ದಾರೆ.

ಇದರಿಂದ ಪಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹಾಗೇ ಸಭೆಗೆ ಗೈರಾಗಿರುವ ಅಧಿಕಾರಿಗಳಿಗೆ ನೋಟಿಸ್‌ ನೀಡುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರು.

ಪಂಚಾಯಿತಿ ವ್ಯಾಪ್ತಿಯಲ್ಲಿನ ಕಸದ ಸಮಸ್ಯೆ, ಪಡಿತರದಲ್ಲಿ ಕಲ್ಲು ಸೇರಿ ಹಲವು ವಿಷಯಗಳ ಕುರಿತು ಸಾರ್ವಜನಿಕರು
ಆಯಾ ಇಲಾಖೆ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಪಂ ಸದಸ್ಯೆ ವೇದಶ್ರೀ ಲಕ್ಷ್ಮೀನಾರಾಯಣ್‌, ಪಂಚಾಯಿತಿ ಅಧ್ಯಕ್ಷೆ ಪದ್ಮಾವತಿ, ಉಪಾಧ್ಯಕ್ಷೆ ಲೀಲಾವತಿ, ಸದಸ್ಯರಾದ ಸನಾವುಲ್ಲಾ, ಲೋಕೆಶ್‌, ಯಲ್ಲಪ್ಪ, ರವಿ ಲಿಂಗರಾಜ ಅರಸು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next