Advertisement

Forest Dept: ಅರಣ್ಯ ಪ್ರದೇಶದಲ್ಲಿದೆ ಎಂದು ಬಡಮಂದಿಯ ಮನೆ ಫೌಂಡೇಶನ್ ಕಿತ್ತೆಸೆದ ಅಧಿಕಾರಿಗಳು

03:25 PM Oct 07, 2023 | Team Udayavani |

ಬೆಳ್ತಂಗಡಿ: ಕಳೆಂಜ ಗ್ರಾಮದ ಅಮ್ಮಿನಡ್ಕ ಎಂಬಲ್ಲಿದ್ದ ಹಳೆ ಮನೆ ತೆರವುಗೊಳಿಸಿ ನೂತನ ಮನೆ ನಿರ್ಮಾಣಕ್ಕೆ ಮುಂದಾದ ಕುಟುಂಬದ ಫೌಂಡೇಶನ್ ಕಿತ್ತೆಸೆದು ಅರಣ್ಯ ಇಲಾಖೆ ದರ್ಪ ತೋರಿದ ಘಟನೆ ನಡೆದಿದೆ.

Advertisement

ಕಳೆಂಜ ಗ್ರಾದಮದ ಅಮ್ಮಿ‌ಡ್ಕ ಕುದ್ದಮನೆ ಸೇಸ ಗೌಡ ಎಂಬವರ ಕುಟುಂಬ ಸುಮಾರು 150  ವರ್ಷದ ಹಿಂದೆ ತಮ್ಮ ಸ್ವಾಧೀನದ ಜಾಗದಲ್ಲಿ ಮನೆ ನಿರ್ಮಾಣಕ್ಕೆ ಮುಂದಾಗಿತ್ತು. ಆದರೆ ಅ.6 ರಂದು ಅರಣ್ಯ ಇಲಾಖೆ ಫೌಂಡೇಶನ್ ಕಿತ್ತೆಸೆದು ಬಡ ಕುಟುಂಬದ ಮುಂದೆ ದರ್ಪ ತೋರಿರುವ ಬಗ್ಗೆ ಮನೆ ಮಗ ನೊಂದು ಆತ್ಮಹತ್ಯೆಗೆ ಮುಂದಾಗಿದ್ದ.

ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅ.7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ, ಸ್ಥಳದಲ್ಲೆ ಶೆಡ್ ನಿರ್ಮಾಣಕ್ಕೆ ಮುಂದಾದರು. ಈ ವೇಳೆ ಅರಣ್ಯ ಇಲಾಖೆ ಮತ್ತು ಶಾಸಕರ ಮಧ್ಯೆ ಗಂಭೀರ ಮಾತಿನ ಚಕಮಕಿಗೆ ಕಾರಣವಾಯಿತು.

309 ಸರ್ವೇ ನಂಬರ್ ನಲ್ಲಿ ಸುಮಾರು 120ಕ್ಕೂ ಅಧಿಕ ಮಂದಿ ವಾಸವಾಗಿದ್ದಾರೆ. ಆದರೆ ಇದು ಅರಣ್ಯ ಎಂದಿರುವುದರಿಂದ ಅರಣ್ಯ ಇಲಾಖೆ ಮನೆ ಕೆಡವಿದೆ. ಮನೆ ಮಂದಿಗೆ ಯಾವುದೇ ನೋಟಿಸ್ ಮಾಹಿತಿ ನೀಡದೆ ತೆರವುಗೊಳಿಸಿದ್ದಾರೆ ಎಂದು ಶಾಸಕರ ಸಮ್ಮುಖದಲ್ಲಿ ಊರವರೊಡಗೂಡಿ ತಾತ್ಕಾಲಿಕ ಶೆಡ್ ನಿರ್ಮಿಸಿದರು. ಇದಕ್ಕೆ ಅಡ್ಡಿಪಡಿಸುವ ಮೊದಲು ಕಂದಾಯ ಇಲಾಖೆ ಹಾಗೂ ಅರಣ್ಯ ಜಂಟಿ ಸರ್ವೇ ನಡೆಸಿ ಬಳಿಕ ತೆರವುಗೊಳಿಸಿ ಎಂದು ಸೂಚಿಸಿದರು.

ಸ್ಥಳದಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಕರೆ‌ ಮಾಡಿದ ಶಾಸಕ ಹರೀಶ್ ಪೂಂಜ, ಸಮಸ್ಯೆ ಬಗ್ಗೆ ಮನವರಿಕೆ ಮಾಡಿದರು. ಸಚಿವರು ಸದ್ಯ ತೆರವುಗೊಳಿಸದಂತೆ ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ಮೇಲಧಿಕಾರಿಗಳಿಂದ ವರದಿ ಪಡೆದು ಬಳಿಕ ನಿರ್ಧಾರ ತೆಗೆದುಕೊಳ್ಳುವಂತೆ ಆದೇಶಿಸಿದರು.

Advertisement

ಪುತ್ತೂರು ಎಸಿಎಫ್ ಸುಬ್ಬಯ್ಯ ನಾಯ್ಕ್, ಉಪ್ಪಿನಂಗಡಿ ಅರಣ್ಯಧಿಕಾರಿ ಜಯಪ್ರಕಾಶ್, ಕಳೆಂಜ ಉಪ ವಲಯರಣ್ಯಾಧಿಕಾರಿ ಪ್ರಶಾಂತ್, ಎಸ್ಐ ಧರ್ಮಸ್ಥಳ ಸಮರ್ಥ್ ಸ್ಥಳದಲ್ಲಿದ್ದರು.

 

 

Advertisement

Udayavani is now on Telegram. Click here to join our channel and stay updated with the latest news.

Next