ಕುಂದಾಪುರ: ಇಲ್ಲಿನ ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ 17 ವರ್ಷದ ಬಾಲಕಿಯ ವಿವಾಹ ನಡೆಸಲು ಮುಂದಾದ ವೇಳೆ ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಡೆದ ಘಟನೆ ಗುರುವಾರ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ 17 ವರ್ಷದ ಬಾಲಕಿಗೆ 28 ವರ್ಷದ ಹುಡುಗನೊಂದಿಗೆ ಮದುವೆ ನಿಶ್ಚಯವಾಗಿತ್ತು. ತ್ರಾಸಿ ಮಹಾಗಣಪತಿ ಸಭಾಭವನದಲ್ಲಿ ವಿವಾಹ ಸಮಾರಂಭಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡು 200 ಕ್ಕೂ ಹೆಚ್ಚು ಮಂದಿ ಸೇರಿದ್ದರು.
ಮಾಹಿತಿ ತಿಳಿದ ಉಡುಪಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇತರ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ತೆರಳಿ ಬಾಲ್ಯವಿವಾಹವನ್ನು ತಡೆದಿದ್ದು, ಎರಡೂ ಕುಟುಂಬದವರಿಗೂ ಬಾಲ್ಯವಿಹಾಹ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ ಬಗ್ಗೆ ಅರಿವು ಮೂಡಿಸಿದರು. ಕುಟುಂಬಿಕರು, ಹಾಲ್ ಮಾಲೀಕರು ಮತ್ತು ಪುರೋಹಿತರಿನಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಯಿತು.
ಇದನ್ನೂ ಓದಿ:ಉಡುಪಿ ಜಿಲ್ಲೆಯ ಬೀಚ್ ಗಳಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಕುಂದಾಪುರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಅಂಗನವಾಡಿ ಮೇಲ್ವಿಚಾರಕಿ ಪ್ರಭಾವತಿ, ರಕ್ಷಣಾಧಿಕಾರಿ ಕಪಿಲ, ಸಮಾಜ ಕಾರ್ಯಕರ್ತೆ ಸುರಕ್ಷಾ, ಸಹಾಯಕ ಉಪನಿರೀಕ್ಷಕರು ರಘುರಾಮ, ಹೆಡ್ ಕಾನ್ಸ್ಟೇಬಲ್ ಮೋಹನ್ ಪೂಜಾರಿ, ಮಾಹಿಳಾ ಪೊಲೀಸ್ ಗಂಗೊಳ್ಳಿ ಠಾಣೆಯ ರೂಪ, ಎಸ್ ಪಿ .ಡಿ .ಓ ಶೋಭಾ, ಅಕೌಂಟಂಟ್ ಶಿವಾನಂದ, ತ್ರಾಸಿ ಗ್ರಾಮ ಪಂಚಾಯತ್ ಸಂದೀಪ್, ಗುಡ್ಡೆಯಂಗಡಿ ಅಂಗನವಾಡಿ ಕಾರ್ಯಕರ್ತೆ ಜಯಮಾಲಾ ಭಾಗವಹಿಸಿದ್ದರು