ಗಳನ್ನು ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶವನ್ನು ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಸಿಬ್ಬಂದಿ ಮತ್ತು
ಆಡಳಿತ ಸುಧಾರಣೆ ಇಲಾಖೆ ಹಿಂಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
Advertisement
ರೈಲ್ವೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಮತ್ತು ಕೆಎಸ್‌ಆರ್‌ಪಿ ಡಿಐಜಿ ಸಂದೀಪ್ ಪಾಟೀಲ್‌ರನ್ನು ರಾಜ್ಯ ಗುಪ್ತಚರ ವಿಭಾಗ,ಬೀದರ್ ಜಿಲ್ಲಾ ವರಿಷ್ಠಾಧಿಕಾರಿ ಡಿ.ದೇವರಾಜ್‌ರನ್ನು ಬೆಂಗಳೂರು ಕೇಂದ್ರ ವಿಭಾಗ, ಎಸಿಬಿ ಎಸ್ಪಿ ಎಸ್.ಗಿರೀಶ್ ರನ್ನು ಈಶಾನ್ಯ ವಿಭಾಗಕ್ಕೆ ಹಾಗೂ ಚಿಕ್ಕಮಗಳೂರು ಜಿಲ್ಲಾ ವರಿಷ್ಠಾಧಿಕಾರಿ ಅಣ್ಣಾಮಲೈರನ್ನು ರಾಮನಗರ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಈ ಮಧ್ಯೆ ಸುಪ್ರೀಂಕೋರ್ಟ್ ಬಹುಮತ ಸಾಬೀತು ಪಡಿಸದ ಹೊರತು ಯಾವುದೇ ಆಡಳಿತ ನೀತಿ, ನಿರೂಪಣೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಆದೇಶದ ಬೆನ್ನಲ್ಲೇ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಹಿಂಪಡೆದಿರುವ ಡಿಪಿಎಆರ್, ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಸ್ಥಳಗಳಲ್ಲೇ ಮುಂದುವರಿಯುವಂತೆ ಸೂಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಇತ್ತ ವರ್ಗಾವಣೆ ಆದೇಶ ಬರುತ್ತಿದ್ದಂತೆ ರೈಲ್ವೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ಮತ್ತು ಕೆಎಸ್‌ಆರ್‌ಪಿ ಡಿಐಜಿ ಸಂದೀಪ್ ಪಾಟೀಲ್ ರಾಜ್ಯ ಗುಪ್ತಚರ ವಿಭಾಗದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.