Advertisement

Belagavi; ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲವರ್ಣ ಚಿತ್ರ ಅನಾವರಣ

11:48 AM Dec 09, 2024 | Team Udayavani |

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ವಿಶ್ವದ ಮೊದಲ ಸಂಸತ್ತು ಎಂಬ ಖ್ಯಾತಿಯ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರವನ್ನು ಸೋಮವಾರ (ಡಿ.09) ಅನಾವರಣ ಮಾಡಲಾಯಿತು.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸುವರ್ಣ ವಿಧಾನಸೌಧದ ಮೊದಲ ಮಹಡಿಯಲ್ಲಿ ತೈಲಚಿತ್ರ ಅನಾವರಣಗೊಳಿಸಿದರು.

ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಮೊದಲಾದವರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next