ಚಿಕ್ಕಬಳ್ಳಾಪುರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾಗೂ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಜಿಲ್ಲಾ ಕೇಂದ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟಿಸಿ ಧಿಕ್ಕಾರ ಕೂಗಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ವತಿಯಿಂದ ಬಿಬಿ ರಸ್ತೆ ಮುಖಾಂತರ ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ರಸ್ತೆ ತಡೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ಧೋರಣೆಗಳನ್ನು ಖಂಡಿಸಿ ಘೋಷಣೆ ಕೂಗಿ ಕೂಡಲೇ ತೈಲ ಬೆಲೆಗಳನ್ನು ಇಳಿಸಬೇಕೆಂದು ಅಗ್ರಹಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ನಗರದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಬಳಿಕ ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಕೆಲಕಾಲ ಧರಣಿ ನಡೆಸಿ ತಮ್ಮ ಬೇಡಿಕೆಗಳ ಮನವಿ ಪತ್ರವನ್ನು ಉಪ ವಿಭಾಗಾಧಿಕಾರಿಗಳ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ ಮನವಿ ಕಳುಹಿಸಿಕೊಟ್ಟರು. ಯಲುವಹಳ್ಳಿ ರಮೇಶ್, ಕೆ.ವಿ.ನವೀನ್ ಕಿರಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಮಕೃಷ್ಣ ಮತ್ತು ಜಯರಾಂ, ಬಿ.ಎಸ್.ರಫೀವುಲ್ಲಾ, ಕೆಪಿಸಿಸಿ ಸದಸ್ಯ ಎಸ್.ಪಿ.ಶ್ರೀನಿವಾಸ್, ಜಿಲ್ಲಾ ಕಾರ್ಯದರ್ಶಿ ಕೋನಪಲ್ಲಿ ಕೋದಂಡ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸೋಮಶೇಖರ್,
ಡಿಸಿಸಿ ಬ್ಯಾಂಕ್ ನಿರ್ದೇಶಕ ಮೋಹನ್‌ರೆಡ್ಡಿ, ಸುರೇಶ್, ಕಿಸಾನ್ ಖೇತ್ ವಿಭಾಗದ ರಾಮಕೃಷ್ಣಪ್ಪ, ಜಿಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ತಾಪಂ ಸದಸ್ಯ ಸತೀಶ್, ವಕೀಲ ನಾರಾಯಣಸ್ವಾಮಿ, ಅಡ್ಡಗಲ್ ಶ್ರೀಧರ್, ಮಮತಾಮೂರ್ತಿ, ಮಂಗಳ ಪ್ರಕಾಶ್, ಕುಬೇರ್ ಅಚ್ಚು, ಅರುಣ್, ದೇವಿಶೆಟ್ಟಿಹಳ್ಳಿ ಗಂಗಾಧರ, ನರೇಂದ್ರ ಬಾಬು, ಅಮಾನುಲ್ಲಾ ನಗರಸಭೆ ಸದಸ್ಯರಾದ ಕಣಿತಹಳ್ಳಿ ವೆಂಕಟೇಶ್, ಎಪಿಎಂಸಿ ನಿರ್ದೇಶಕ ಮಿಲ್ಟನ್ ವೆಂಕಟೇಶ್, ಅಂಬರೀಶ್, ನರಸಿಂಹ ಮೂರ್ತಿ, ಅರುಣ್ ಇದ್ದರು.