Advertisement
ಮರವಂತೆ ಬಳಿ ಟ್ಯಾಂಕರ್ ಹಾಗೂ ಚಾಲಕ ಧ್ಯಾನಚಂದ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
25-30ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಬಿದ್ದಿದ್ದು, 6 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗೊಳ್ಳಿ ಸಮೀಪ ಚಾಲಕನಿಗೆ ಆಯಿಲ್ ಸೋರಿಕೆ ಗೊತ್ತಾಗಿತ್ತು.
Related Articles
Advertisement
ಪೊಲೀಸರಿಂದ ಏಕಮುಖ ಸಂಚಾರ ವ್ಯವಸ್ಥೆಚೌತಿಯ ದಿನವಾದ ಕಾರಣ ಬೆಳಗ್ಗೆಯಿಂದಲೇ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಇತ್ತು. ಅಂದಾಜು 8.30ರ ಬಳಿಕ ಟ್ಯಾಂಕರ್ ಸಾಗಿದ ಹೆದ್ದಾರಿಯಲ್ಲಿ ಬೈಕ್ ಸವಾರರು ಬೀಳುತ್ತಿರುವುದು ತೈಲದಂತಹ ವಸ್ತು ಸೋರಿಕೆಯಾಗಿರುವುದು ಗಮನಕ್ಕೆ ಬರುತ್ತಲೆ ಎಚ್ಚೆತ್ತುಕೊಂಡ ಕೋಟ, ಕುಂದಾಪುರ ಹಾಗೂ ಗಂಗೊಳ್ಳಿ ಪೊಲೀಸರು ಪ್ರಕರಣ ವರದಿಯಾದ ತೆಕ್ಕಟ್ಟೆಯಿಂದ ಮೊದಲ್ಗೊಂಡು ಹೆಮ್ಮಾಡಿಯವರೆಗೆ ಆಯಕಟ್ಟಿನ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಏಕಮುಖ ಸಂಚಾರ ವ್ಯವಸ್ಥೆ ಮಾಡಿದರು. ಪೊಲೀಸರಿಗೆ ಹಲವೆಡೆ ಸಾರ್ವಜನಿಕರು ಸಹಕಾರ ನೀಡಿದರು. ಶನಿವಾರ ಮಧ್ಯಾಹ್ನದವರೆಗೆ 15 ಕಿ.ಮೀ. ವ್ಯಾಪ್ತಿಯಲ್ಲಿ ಒನ್ ವೇ ಮಾಡಲಾಗಿದ್ದು, ಸಂಭಾವ್ಯ ಅಪಘಾತ ತಪ್ಪಿಸಲು ಮುಂಜಾಗ್ರತ ಕ್ರಮ ವಹಿಸಲಾಗಿತ್ತು. ದ್ವಿಚಕ್ರ ವಾಹನ ಸವಾರರು ಹಾಗೂ ಲಘು ವಾಹನಕ್ಕೆ ಸಮಸ್ಯೆಯಾಗುತ್ತಿದ್ದಂತೆ ಅಗ್ನಿಶಾಮಕ ದಳದವರು, ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಂಪೆನಿಗಳು ರಸ್ತೆಗೆ ನೀರು ಹಾಕಿ ಸೋರಿಕೆಯಾದ ಸೋಪ್ ಆಯಿಲ್‌ನಿಂದ ವಾಹನ ಸಂಚಾರಕ್ಕೆ ಹೆಚ್ಚಿನ ಸಮಸ್ಯೆಯಾಗದಂತೆ ಕ್ರಮ ವಹಿಸಿದರು.