Advertisement
ಈ ಕುರಿತು ಹೇಳಿಕೆ ನೀಡಿರುವ ಅವರು ವೀರಶೈವ ಸಮಾಜದ ಅಭಿವೃದ್ದಿಗಾಗಿ ನಿಗಮವನ್ನು ಸ್ಥಾಪಿಸಲಾಗಿದೆ ಅದೇ ರೀತಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನ್ನದಾತವಾಗಿರುವ ಮತ್ತು ಕೃಷಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಒಕ್ಕಲಿಗರಲ್ಲೂ ಸಹ ಅನೇಕ ಮಂದಿ ಕೂಲಿ ಕಾರ್ಮಿಕರು ಮತ್ತು ಬಡವರಿದ್ದು ಅವರ ಶೈಕ್ಷಣಿಕ ಪ್ರಗತಿ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಒಕ್ಕಲಿಗರ ಅಭಿವೃದ್ದಿ ನಿಗಮವನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.
Related Articles
Advertisement
ರಾಜ್ಯದ ಗಡಿ ಪ್ರದೇಶದಲ್ಲಿ ಸ್ವಾಭಿಮಾನಿ ಕನ್ನಡಿಗರಿಗೆ ಮರಾಠಿಗರು ವಿನಾಕಾರಣ ತೊಂದರೆ ಮತ್ತು ಕಿರುಕುಳ ನೀಡುತ್ತಿದ್ದಾರೆ ಸರ್ಕಾರ ಗಡಿ ಪ್ರದೇಶಗಳಿಗೆ ಹೊಂದುಕೊಂಡಿರುವ ಜಿಲ್ಲೆಗಳಲ್ಲಿರುವ ಕನ್ನಡಿಗರಿಗೆ ಅವರ ಅಭಿವೃದ್ದಿಗಾಗಿ ವಿಶೇಷ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಅದೇ ರೀತಿ ಕನ್ನಡ ಅಭಿವೃದ್ದಿಗಾಗಿ ಇರುವ ಪ್ರಾಧಿಕಾರಕ್ಕೆ ವಿಶೇಷ ಅನುದಾನ ನೀಡುವ ಬದಲಿಗೆ ಮರಾಠ ಸಮುದಾಯದ ಅಭಿವೃದ್ದಿಗಾಗಿ 50 ಕೋಟಿ ರೂ.ಗಳು ಮೀಸಲಿಟ್ಟು ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ಧೋರಣೆಯನ್ನು ಬಲವಾಗಿ ಖಂಡಿಸಿದರು.
ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ದಿವ್ಯ ನಿರ್ಲಕ್ಷ ವಹಿಸಿರುವ ಸರ್ಕಾರ ಮರಾಠಿಗರಿಗೆ ಪ್ರತ್ಯೇಕ ಪ್ರಾಧಿಕಾರ ಮಾಡಿರುವುದು ನೋಡಿದರೆ ಮುಂದಿನ ದಿನಗಳಲ್ಲಿ ಗಡಿ ಪ್ರದೇಶಗಳ ಜಿಲ್ಲೆಗಳನ್ನು ಮಹಾರಾಷ್ಟ್ರದಲ್ಲಿ ಸೇರ್ಪಡೆ ಮಾಡುವ ನಿರ್ಧಾರ ತೆಗೆದುಕೊಳ್ಳುವ ದಿನಗಳು ದೂರವಿಲ್ಲ ಎಂಬ ಅನುಮಾನ ಕನ್ನಡಿಗರು ಮತ್ತು ಕನ್ನಡ ಅಭಿಮಾನಿಗಳಿಗೆ ಮೂಡುವಂತಾಗಿದೆ ಮಹಾರಾಷ್ಟ್ರದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಪ್ರತಿಮೆಯನ್ನು ಸ್ಥಾಪಿಸಲು ಅವಕಾಶ ಮಾಡಿಕೊಟ್ಟಿಲ್ಲ ಅಂತಹದರಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮರಾಠಿಗರಿಗೆ ಪ್ರತ್ಯೇಕ ಅಭಿವೃದ್ದಿ ಪ್ರಾಧಿಕಾರ ಮಾಡುವ ಮೂಲಕ ಕನ್ನಡಿಗರನ್ನು ಅಪಮಾನಗೊಳಿಸಿದೆ ಕೂಡಲೇ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ತಮ್ಮ ನಿಲುವು ಬದಲಾಯಿಸಿ ಪ್ರತ್ಯೇಕ ಪ್ರಾಧಿಕಾರದ ಅದೇಶವನ್ನು ವಾಪಸ್ಸು ಪಡೆಯಬೇಕೆಂದು ಒತ್ತಾಯಿಸಿದ್ದಾರೆ.