ಮಾಡಿದರೂ ಈ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜನತೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಲಿದ್ದಾರೆ
ಎಂದು ಕ್ಷೇತ್ರದ ಒಕ್ಕಲಿಗ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದರು.
Advertisement
ನಗರದಲ್ಲಿ ಮಂಗಳವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಚಾಮುಂಡೇಶ್ವರಿ ಕ್ಷೇತ್ರದ ಒಕ್ಕಲಿಗ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದರು. ಮಾವಿನಹಳ್ಳಿ ಲಾಯರ್ ಸಿದ್ದೇಗೌಡ ಮಾತನಾಡಿ, ಕ್ಷೇತ್ರದ ಒಕ್ಕಲಿಗರು ಜಾತಿ ನೋಡದೆ ಕ್ಷೇತ್ರದ ಅಭಿವೃದ್ಧಿ ನೋಡಿ ಮತ ಹಾಕುತ್ತಾ ಬಂದಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ ಸೂಕ್ತ ಅಭ್ಯರ್ಥಿ ಇಲ್ಲ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ, ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರಿಬ್ಬರಲ್ಲಿ ಯಾರು ಉತ್ತಮರು ಎಂಬುದನ್ನು ಕ್ಷೇತ್ರದ ಜನತೆ ತೀರ್ಮಾನ ಮಾಡಿ ಮತ ನೀಡಲಿದ್ದಾರೆ ಎಂದು ಹೇಳಿದರು.
Related Articles
ಸಿದ್ದರಾಮಯ್ಯ ಅವರು, ತಮ್ಮನ್ನು ರಾಜಕೀಯವಾಗಿ ಬೆಳೆಸಿದ ಚಾಮುಂಡೇಶ್ವರಿ ಕ್ಷೇತ್ರದ ಜನರ ಋಣ ತೀರಿಸಲು ಕೊನೆ ಚುನಾವಣೆಗಾಗಿ ಈ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ ಹೇಳಿದರು.
Advertisement
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಯುವಕರು ಮಠಾಧೀಶರು, ಸಮಾಜದ ಮುಖಂಡರ ಭಾವಚಿತ್ರ ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದನ್ನು ನಿಲ್ಲಿಸಲಿ ಎಂದ ಅವರು, ಕೆಂಪಯ್ಯ, ರಾಮಯ್ಯ ಅವರ ಮೂಲಕ ಸಿದ್ದರಾಮಯ್ಯ ಅವರು ಹಣ ಹಂಚಿಕೆ ಮಾಡಿಸುತ್ತಿದ್ದಾರೆ ಎಂಬುದಕ್ಕೆ ಆಧಾರ ಏನಿದೆ, ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಒಂದು ಜಾತಿಗೆ ಸೀಮಿತವಾಗಿ ಕಾರ್ಯಕ್ರಮಗಳನ್ನು ಕೊಟ್ಟಿಲ್ಲ. ಕಳೆದ ಐದುವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಗೆ 400 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಅವರ ರಾಜಕೀಯ ಕೊನೆಯಾಗಲಿದೆ ಎನ್ನಲು ಎಚ್.ಡಿ.ದೇವೇಗೌಡರೇನು ಒಕ್ಕಲಿಗರನ್ನು
ಕೊಂಡುಕೊಂಡಿದ್ದಾರಾ? ಶಾಸಕ ಜಿ.ಟಿ.ದೇವೇಗೌಡ, ಕ್ಷೇತ್ರದ ಜನರ ಕಷ್ಟ ವಿಚಾರಿಸಲಿಲ್ಲ. ಅಭಿವೃದ್ಧಿಯನ್ನೂ ಮಾಡಲಿಲ್ಲ.
ಸತ್ಯನಾರಾಯಣ, ಮಾಜಿ ಶಾಸಕ.