Advertisement

ಓಲಾ ಅಮಾನತು ಆದೇಶ ಹಿಂಪಡೆತ?

05:50 AM Mar 25, 2019 | Vishnu Das |

ಬೆಂಗಳೂರು: ಆ್ಯಪ್‌ ಆಧಾರಿತ ಟ್ಯಾಕ್ಸಿ ಓಲಾ ಸಂಸ್ಥೆ ಸೇವೆ ಅಮಾನತುಗೊಳಿಸಿದ ಕೇವಲ ಮೂರು ದಿನಗಳ ಅಂತರದಲ್ಲಿ ಸರ್ಕಾರ, ತನ್ನ ನಿರ್ಧಾರ ಹಿಂಪಡೆಯಲು ಮುಂದಾಗಿದೆ.

Advertisement

ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಓಲಾ ಸಂಸ್ಥೆಗೆ ನೀಡಿದ್ದ ಪರವಾನಗಿಯನ್ನು ಆರು ತಿಂಗಳು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶ ಸ್ವೀಕರಿಸಿದ ಮೂರು ದಿನಗಳಲ್ಲಿ ಪರವಾನಗಿಯನ್ನು ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ ವಾಪಸ್‌ ನೀಡಬೇಕು ಎಂದು ಸೂಚಿಸಿತ್ತು. ಆದರೆ, ಮೂರು ದಿನಗಳಲ್ಲಿ ತಾನು ನೀಡಿದ್ದ ಆದೇಶವನ್ನೇ ಹಿಂಪಡೆಯಲು ಉದ್ದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next