Advertisement
ದ.ಕ. ಜಿ.ಪಂ. ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಸರಕಾರ ವಿವಿಧ ಸೌಲಭ್ಯಗಳು, ಯೋಜನೆಗಳ ಜಾರಿ, ಶಾಲೆಗಳ ಕುಂದು ಕೊರತೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಮಾಹಿತಿ ಪಡೆದಿದ್ದೇನೆ. 43 ಶಾಲೆ ಗಳಲ್ಲಿ 1ನೇ ತರಗತಿಯಿಂದ ಇಂಗ್ಲಿಷ್ ಶಿಕ್ಷಣ ಆರಂಭಗೊಂಡಿದೆ. ಅನೇಕ ಶಾಲೆಗಳಿಂದ ಆಂಗ್ಲ ತರಗತಿ ಆರಂಭಿಸುವಂತೆ ಬೇಡಿಕೆ ಬಂದಿದೆ ಎಂದರು. ಫಲಿತಾಂಶ ಹೆಚ್ಚಳಕ್ಕೆ ಕ್ರಮ
ಜಿಲ್ಲೆ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮತ್ತೆ ಮುಂಚೂಣಿ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಸಮಗ್ರ ಕಾರ್ಯಯೋಜನೆ ರೂಪಿಸಲು ಸೂಚಿಸಿದ್ದೇನೆ.ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿ ಸುವುದರಿಂದ ಅಂಗನವಾಡಿಗಳಿಗೆ ತೊಂದರೆಯಾಗಲಿದೆ ಎಂಬ ಆಕ್ಷೇಪ ಕೇಳಿ ಬರುತ್ತಿದೆ. ಯಾವುದೇ ಕಾರಣಕ್ಕೆ ಅಂಗನವಾಡಿಗಳನ್ನು ಅವಗಣಿಸುವುದಿಲ್ಲ ಎಂದರು.
Related Articles
Advertisement
ಬಂಟ್ವಾಳ-ಬೆಳ್ತಂಗಡಿ ಬಿಇಒ ಕಚೇರಿ ವ್ಯಾಪ್ತಿಗೆ ಸಂಬಂಧಪಟ್ಟಂತೆ ತಾಂತ್ರಿಕ ಕಾರಣಗಳಿಂದ ವೇತನ ಸಮಸ್ಯೆ ಉಂಟಾಗುತ್ತಿದೆ. ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿ ಜತೆ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು. ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಇಬ್ರಾಹಿಂ, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಜಿ.ಪಂ. ಸದಸ್ಯ ರಾದ ಮಮತಾ ಗಟ್ಟಿ, ಸಾಹುಲ್ ಹಮೀದ್ ಉಪಸ್ಥಿತರಿದ್ದರು.
ಶಾಲೆಗಳಲ್ಲಿ ನೀರು ಕೊರತೆ: ಸ್ಪಂದಿಸಲು ಸೂಚನೆಜಿಲ್ಲೆಯ ಶಾಲೆಗಳಲ್ಲಿ ನೀರಿನ ಕೊರತೆ ಇದ್ದರೆ ತತ್‌ಕ್ಷಣ ಸ್ಪಂದಿಸಿ ಪೂರಕ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆಯ ಬ್ಲಾಕ್ ಮತ್ತು ಕ್ಲಸ್ಟರ್ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಟ್ಯಾಂಕರ್ ಅಥವಾ ಬೋರ್‌ವೆಲ್‌ನ ವ್ಯವಸ್ಥೆ ಮಾಡಿ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಸಚಿವರು ತಿಳಿಸಿದರು.