ನವದೆಹಲಿ: ಲೋಕಸಭೆ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷಗಳ ಮಧ್ಯೆ ಒಮ್ಮತ ಮೂಡದ ನಿಟ್ಟಿನಲ್ಲಿ ಎರಡು ಪಕ್ಷಗಳು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯನ್ನು ಪ್ರಕಟಿಸಿದೆ.
ಅದರಂತೆ ಬಿಜೆಪಿಯಿಂದ ಸಂಸದ ಓಂ ಬಿರ್ಲಾ ಅವರು ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ನಿಂದ ಸಂಸದ ಕೆ. ಸುರೇಶ್ ಮಂಗಳವಾರ ಲೋಕಸಭೆ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಇದರೊಂದಿಗೆ ಎನ್ ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವಿನ ಮಾತುಕತೆ ವಿಫಲವಾಗಿದೆ. ಲೋಕಸಭೆ ಸ್ಪೀಕರ್ ಆಯ್ಕೆ ನಾಳೆ (ಬುಧವಾರ) ನಡೆಯಲಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ ಎನ್ನಲಾಗಿದೆ. ಇದುವರೆಗೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಒಮ್ಮತದ ಮೇರೆಗೆ ಸ್ಪೀಕರ್ ಆಯ್ಕೆಯಾಗುತ್ತಿತ್ತು ಆದರೆ ಈ ಬಾರಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ಸರಿಯಾದ ಸಂವಹನದ ಕೊರತೆಯಿಂದ ಚುನಾವಣೆ ನಡೆಯುವ ಹಂತಕ್ಕೆ ಬಂದಿದೆ ಎಂದು ಹೇಳಲಾಗಿದೆ ಅಲ್ಲದೆ ಆಡಳಿತ ಪಕ್ಷಕ್ಕೆ ಸ್ಪೀಕರ್ ಹುದ್ದೆ ನೀಡಿದರೆ ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷಗಳಿಗೆ ನೀಡಬೇಕು ಎಂದು ಪಟ್ಟು ಹಿಡಿದಿತ್ತು ಈ ಕುರಿತು ನಿರ್ಧಾರ ಕೈಗೊಳ್ಳಲು ಸಮಯಾವಕಾಶ ಬೇಕಾಗಿರುವುದರಿಂದ ಪ್ರತಿಪಕ್ಷಗಳು ಎನ್‌ಡಿಎ ಮಾತಿಗೆ ಸಮ್ಮತಿ ನೀಡಲು ನಿರಾಕರಿಸಿದ್ದು ಇದರಿಂದ ಪ್ರತಿಪಕ್ಷಗಳು ಕೂಡ ಸ್ಪೀಕರ್ ಸ್ಥಾನಕ್ಕೆ ತಮ್ಮ ಅಭ್ಯರ್ಥಿಯನ್ನು ಕಣಕಿಸಿದ್ದು ಜೊತೆಗೆ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಓಂ ಬಿರ್ಲಾ ಅವರು ನಾಪಪತ್ರ ಸಲ್ಲಿಸಿದ್ದಾರೆ. ಅದರಂತೆ ಬುಧವಾರ ಸ್ಪೀಕರ್ ಆಯ್ಕೆ ನಡೆಯಲಿದೆ.
ಇದನ್ನೂ ಓದಿ: Bollywood: ಮದ್ವೆ ದಿನವೇ ಕುಡಿದು ಟೈಟ್ ಆದ ಸೋನಾಕ್ಷಿ ಗಂಡ; ಎಣ್ಣೆ ಪಾರ್ಟಿ ಎಂದ ನೆಟ್ಟಿಗರು