Advertisement

ಓಂಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌: ಯಕ್ಷಗಾನ,ಸಮ್ಮಾನ

10:55 AM Oct 27, 2017 | Team Udayavani |

ಕಲ್ಯಾಣ್‌: ನಗರದಲ್ಲಿ ಹಲವಾರು ಸಂಘ-ಸಂಸ್ಥೆಗಳಿವೆ. ಆದರೆ ಮಹಿಳೆಯರಿಂದಲೇ ಸಂಘಟನೆಯೊಂದು ಸ್ಥಾಪನೆಯಾಗಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕೆಲಸಗಳೊಂದಿಗೆ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸುತ್ತಿರುವ ಏಕೈಕ ಸಂಸ್ಥೆ ಎಂದರೆ ಅದು ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಆಗಿದೆ. ಇಂದು ಕರ್ನಾಟಕ ಗಂಡು ಕಲೆಯೆಂದೆ ಖ್ಯಾತಿಯನ್ನು ಪಡೆದ ಯಕ್ಷಗಾನವನ್ನು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಈ ಸಂಸ್ಥೆಯು ಮಹತ್ತರವಾದ ಪಾತ್ರ ವಹಿಸುತ್ತಿದೆ. ಸಂಸ್ಥೆಯ ಅಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರೋರ್ವ ಉತ್ತಮ ಯಕ್ಷಗಾನ ಕಲಾವಿದೆಯಾಗಿದ್ದು, ಇತರ ಕಲಾವಿದರನ್ನು ಪ್ರೋತ್ಸಾಹಿಸಿ ಅವರಿಗೆ ವೇದಿಕೆಯನ್ನು ಕಲ್ಪಿಸಿಕೊಡುತ್ತಿರುವುದು ಅಭಿನಂದನೀಯವಾಗಿದೆ ಎಂದು ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ನುಡಿದರು.

Advertisement

ಇತ್ತೀಚೆಗೆ ಕಲ್ಯಾಣ್‌ ಪಶ್ಚಿಮದ ಮಹಾವೀರ ಸಭಾಗೃಹದಲ್ಲಿ ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ವತಿಯಿಂದ ಆಯೋಜಿಸಲಾಗಿದ್ದ ಅಜೆಕಾರು ಕಲಾಭಿಮಾನಿ ಬಳಗದ ಪ್ರಬುದ್ಧ ಕಲಾವಿದರ ಕೂಡುವಿಕೆಯಲ್ಲಿ ಪ್ರದರ್ಶನಗೊಂಡ ಯಕ್ಷಗಾನದ ನಡುವೆ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ನನಗೆ ನೀವೆಲ್ಲರೂ ಅಭಿಮಾನ, ಪ್ರೀತಿಯಿಂದ ಮಾಡಿದ ಸಮ್ಮಾನವನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಿದ್ದೇನೆ. ಉತ್ತಮ ಸಂಘಟಕಿಯಾಗಿರುವ ಚಿತ್ರಾ ಶೆಟ್ಟಿ ಅವರ ನೇತೃತ್ವದಲ್ಲಿ ಸಂಸ್ಥೆಯು ಇನ್ನಷ್ಟು ಅಭಿವೃದ್ಧಿಯತ್ತ ಸಾಗಿ ಇತರ ಸಂಘಟನೆಗಳಿಗೆ ಮಾದರಿಯಾಗಿ ಬೆಳೆದು ನಿಲ್ಲಲಿ ಎಂದು ನುಡಿದು ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ದಿವಾಕರ ಶೆಟ್ಟಿ ಅವರು ಮಾತನಾಡಿ, ಓಂ ಶಕ್ತಿ ಮಹಿಳಾ ಸಂಸ್ಥೆಯೊಂದಿಗೆ ಕಳೆದ ಹಲವಾರು ವರ್ಷಗಳಿಂದ ಅವಿನಾಭಾವ ಸಂಬಂಧವನ್ನು ಹೊಂದಿದ್ದೇನೆ. ಸಂಸ್ಥೆಯ ಪ್ರತಿಯೊಂದು ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತೇನೆ. ಸಂಸ್ಥೆಯ ಸಮಾಜ ಸೇವೆ ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ಸಂಸ್ಥೆಯ ಕಾರ್ಯವೈಖರಿ ಎಷ್ಟಿದೆ ಎಂಬುದು ಇಂದಿನ ಸಭಿಕರನ್ನು ಕಂಡಾಗ ಮನದಟ್ಟಾಗುತ್ತದೆ. ಸಂಸ್ಥೆಯ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದರು.

ಸಂಸ್ಥೆಯ ಅಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರು ಮಾತನಾಡಿ, ನಮ್ಮ ಸಂಸ್ಥೆಯ ದಾನಿಗಳ ಪ್ರೋತ್ಸಾಹ, ಸಹಕಾರದಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ನಾವು ಯಕ್ಷಗಾನಕ್ಕೂ ಪ್ರೋತ್ಸಾಹ ನೀಡಿ ಅದನ್ನು ಉಳಿಸಿ-ಬೆಳೆಸಲು ಪ್ರಯತ್ನಿಸುತ್ತಿದ್ದೇವೆ. ನಿಮ್ಮೆಲ್ಲರ ಸಹಕಾರ, ಆಶೀರ್ವಾದ ಸದಾಯಿರಲಿ. ನಾವು ಇನ್ನೂ ಉತ್ತಮ ಕಾರ್ಯ ಕಲಾಪಗಳನ್ನು ಮಾಡಲು ಕಟಿಬದ್ಧರಾಗಿದ್ದೇವೆ. ಅದಕ್ಕಾಗಿ ಎಲ್ಲರ ಸಹಕಾರದ ಅಗತ್ಯವಿದೆ ಎಂದು ನುಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಸಂಘ ಡೊಂಬಿವಲಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಇಂದ್ರಾಳಿ ದಿವಾಕರ ಶೆಟ್ಟಿ ಮತ್ತು ಮಹಿಳಾ ವಿಭಾಗದ ನೂತನ ಕಾರ್ಯಾಧ್ಯಕ್ಷೆಯಾಗಿ ಆಯ್ಕೆಯಾದ ಸುಷ್ಪಾ ದಿವಾಕರ ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು. ಅಲ್ಲದೆ ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಶಾಲಿನಿ ಶೆಟ್ಟಿ, ಗ್ರೀಷ್ಮಾ ಶೆಟ್ಟಿ, ಸುರೇಖಾ ಶೆಟ್ಟಿ, ಯಶೋದಾ ಶೆಟ್ಟಿ, ಸುಚೇತಾ ಶೆಟ್ಟಿ, ಯಶೋದಾ ಶೆಟ್ಟಿ, ಜ್ಯೋತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಅಜೆಕಾರು ಕಲಾಭಿಮಾನಿ ಬಳಗದ ಪ್ರಬುದ್ಧ ಕಲಾವಿದರ ಕೂಡುವಿಕೆಯಲ್ಲಿ ಕೋರªಬ್ಬು ಬಾರಗ ಯಕ್ಷಗಾನ ಪ್ರದರ್ಶನಗೊಂಡಿತು. ಕಲಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next