Advertisement
ಇನ್ನು ಸುಪ್ರೀಂ ಕೋರ್ಟ್ ತೀರ್ಪು ಹೊರ ಬೀಳುತ್ತಿದ್ದಂತೆ ಇಲ್ಲಿನ ನಾಯಕರು ತಮ್ಮ ತಮ್ಮ ಅನಿಸಿಕೆಗಳನ್ನು ಹೇಳಿಕೊಂಡಿದ್ದಾರೆ…
Related Articles
Advertisement
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದ್ ಅವರು ಸುಪ್ರೀಂ ಕೋರ್ಟ್‌ನ ತೀರ್ಪನ್ನು ಕೇಳಲು ತುಂಬಾ ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಅಥವಾ ಸುಪ್ರೀಂ ಕೋರ್ಟ್ ಎರಡು ಸಂಸ್ಥೆಗಳು ಮಾತ್ರ ನಿರ್ಧಾರ ಕೈಗೊಳ್ಳಬಹುದು ಎಂದು ಈಗಾಗಲೇ ಹೇಳಿದ್ದೇನೆ ಎಂದರು. ಕೇಂದ್ರ ಸರ್ಕಾರವು 370 ನೇ ವಿಧಿಯ ನಿಬಂಧನೆಗಳನ್ನು ಪುನಃಸ್ಥಾಪಿಸುವುದಿಲ್ಲ. ಆದರೆ ಸುಪ್ರೀಂ ಕೋರ್ಟ್ ಮೇಲೆ ಭರವಸೆಇತ್ತು ಆದರೆ ಇಂದು ಈ ಭರವಸೆಯೂ ಕೊನೆಗೊಂಡಿತು ಎಂದು ಹೇಳಿದ್ದಾರೆ.
ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ ಮೆಹಬೂಬಾ ಮುಫ್ತಿ ಹೇಳಿಕೆಯಂತೆ ‘ಜಮ್ಮು ಮತ್ತು ಕಾಶ್ಮೀರದ ಜನರು ಭರವಸೆ ಕಳೆದುಕೊಳ್ಳುವುದಿಲ್ಲ ಅಥವಾ ಬಿಡುವುದಿಲ್ಲ. ಗೌರವ ಮತ್ತು ಘನತೆಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ. ಈ ಹೋರಾಟ ಸುಪ್ರೀಂ ಕೋರ್ಟ್ ತೀರ್ಪಿನಿಂದ ಕೊನೆ ಗೊಳ್ಳುವುದಿಲ್ಲ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.
ನಿರ್ಧಾರವನ್ನು ಸ್ವಾಗತಿಸುತ್ತೇವೆ: ಹಿರಿಯ ಕಾಂಗ್ರೆಸ್ ನಾಯಕ ಕರಣ್ ಸಿಂಗ್:ಸರ್ವೋಚ್ಚ ನ್ಯಾಯಾಲಯವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದೆ ಎಂದು ಮಹಾರಾಜ ಹರಿ ಸಿಂಗ್ ಅವರ ಪುತ್ರ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಕರಣ್ ಸಿಂಗ್ ಹೇಳಿದ್ದಾರೆ. ಎಲ್ಲಾ ಸಂದರ್ಭಗಳನ್ನು ಪರಿಗಣಿಸಿ ಸುಪ್ರೀಂ ಕೋರ್ಟ್ ಆ ತೀರ್ಮಾನಕ್ಕೆ ಬಂದಿದೆ. ಸುಪ್ರೀಂ ಕೋರ್ಟ್‌ನ ತೀರ್ಪನ್ನು ಅವರು ಸ್ವಾಗತಿಸುತ್ತೇವೆ ಆದರೆ ಈ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ಕೆಲವು ಜನರಿಗೆ ಅಸಮಾಧಾನವನ್ನುಂಟು ಮಾಡುತ್ತದೆ. ಆದರೆ, ಏನೇ ನಡೆದರೂ ಅದು ಸಾಂವಿಧಾನಿಕ ಮಾನ್ಯತೆ ಎಂಬುದು ಈಗ ಸ್ಪಷ್ಟವಾಗಿದೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು, “ಹತಾಶೆ ಆದರೆ ನಿರಾಶೆಗೊಂಡಿಲ್ಲ. ಹೋರಾಟ ಮುಂದುವರಿಯುತ್ತದೆ” ಎಂದು ಹೇಳಿದರು, “ಬಿಜೆಪಿ ಇಲ್ಲಿಗೆ ತಲುಪಲು ದಶಕಗಳನ್ನು ತೆಗೆದುಕೊಂಡಿತು. ನಾವು ಕೂಡ ದೀರ್ಘಾವಧಿಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ”