Advertisement

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

07:17 PM Dec 07, 2021 | Team Udayavani |

ಮುಂಬೈ: ಸಾಲದ ಮೇಲಿನ ಬಡ್ಡಿದರ ಯಥಾ ಸ್ಥಿತಿಯಲ್ಲಿಯೇ ಮುಂದುವರಿಯುವ ಸಾಧ್ಯತೆ ಇದೆ. ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳುವ ಸಾಧ್ಯತೆ ಎಂದು ಹೇಳಲಾಗುತ್ತಿದೆ.

Advertisement

ಸೋಮವಾರ (ಡಿ.6)ದಿಂದ ಶುರುವಾಗಿರುವ ಆರ್‌ಬಿಐ ಐವರು ಸದಸ್ಯರ ಹಣಕಾಸು ನೀತಿಗಳ ಪರಿಶೀಲನಾ ಸಮಿತಿ (ಎಂಪಿಸಿ)ಯ ಸಭೆ ಡಿ.8ರಂದು ಮುಕ್ತಾಯವಾಗಲಿದೆ.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಅವರು ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ನಿರ್ಣಯಗಳನ್ನು ವಿವರಿಸಲಿದ್ದಾರೆ.

ಇದನ್ನೂ ಓದಿ:ಶಾಲೆಗೆ ಗೈರಾದ ವಿದ್ಯಾರ್ಥಿಯನ್ನು ಕರೆಯಲು ಹೋದ ಮುಖ್ಯ ಶಿಕ್ಷಕನ ಮೇಲೆ ಹಲ್ಲೆ: ದೂರು ದಾಖಲು

ಅಕ್ಟೋಬರ್‌ನಲ್ಲಿ ನಡೆದಿದ್ದ ಸಭೆಯಲ್ಲಿಯೂ ಕೂಡ ಬಡ್ಡಿದರವನ್ನು ಯಥಾ ಸ್ಥಿತಿಯಲ್ಲಿ ಇರಿಸಲು ನಿರ್ಧರಿಸಲಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next