Advertisement
ಈ ಹೊತ್ತಿಗೆ ಜಗತ್ತಿನ ಸುಮಾರು 30 ದೇಶಗಳಲ್ಲಿ ಒಮಿ ಕ್ರಾನ್ ಪ್ರಕರಣಗಳು ಕಾಣಿಸಿಕೊಂಡಿವೆ. ಆದರೆ ಅವುಗಳಲ್ಲಿ ಯಾವ ಸೋಂಕಿತರ ಪರಿಸ್ಥಿತಿಯೂ ಗಂಭೀರವಾಗಿಲ್ಲ. ಆದರೂ ಈ ರೂಪಾಂತರಿ ಯಾವ ಮಟ್ಟದಲ್ಲಿ ಘಾಸಿ ಮಾಡ ಬಲ್ಲದು ಎಂಬುದಿನ್ನೂ ಖಚಿತವಾಗಿಲ್ಲ. ಆದ್ದರಿಂದ ಇದು ಅಪಾಯಕಾರಿಯಲ್ಲ ಎಂದು ಸದ್ಯದ ಮಟ್ಟಿಗೆ ಸ್ಪಷ್ಟವಾಗಿ ಹೇಳಬಹುದು ಎಂದು ಅವರು ಹೇಳಿದ್ದಾರೆ.
Related Articles
Advertisement
ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಕರ್ನಾಟಕ ಸೇರಿದಂತೆ 6 ರಾಜ್ಯಗಳಿಗೆ ಕೇಂದ್ರ ಸರಕಾರವು ಪತ್ರ ಬರೆದಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಿ, ಹೊಸ ಹಾಟ್‌ಸ್ಪಾಟ್‌ಗಳ ಮೇಲೆ ಕಣ್ಣಿಡಿ, ಪಾಸಿಟಿವ್ ಬಂದವರ ಸಂಪರ್ಕಿತರ ಪತ್ತೆಗೆ ಕ್ರಮ ಕೈಗೊಳ್ಳಿ, ಎಲ್ಲ ಪಾಸಿಟಿವ್ ಸ್ಯಾಂಪಲ್‌ಗಳನ್ನೂ ವಂಶವಾಹಿ ಪರೀಕ್ಷೆಗೆ ಕಳುಹಿಸಿಕೊಡಿ, ಆರೋಗ್ಯ ಮೂಲಸೌಕರ್ಯಗಳನ್ನು ಸನ್ನದ್ಧವಾಗಿಡಿ. ಎಲ್ಲದಕ್ಕಿಂತಲೂ ಹೆಚ್ಚಾಗಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿ ಎಂದು ಪತ್ರದಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಸೂಚಿಸಿದ್ದಾರೆ.