ಬೆಂಗಳೂರು: ಕರ್ನಾಟಕದಲ್ಲಿ ಮೂರನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ಪುರುಷನ ಪರೀಕ್ಷಾ ವರದಿ ಪಾಸಿಟಿವ್ ಆಗಿದೆ.
Advertisement
ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಭಾನುವಾರ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ಪುರುಷನ ಪರೀಕ್ಷೆ ನಡೆಸಿದ್ದು, ಅವರನ್ನು ಪ್ರತ್ಯೇಕಿಸಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಪ್ರಾಥಮಿಕ ಮತ್ತು 15 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.