Advertisement

ಕಲ್ಲಡ್ಕ: ಆಮ್ನಿ- ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಸವಾರ ಮೃತ್ಯು

08:22 AM Nov 23, 2020 | keerthan |

ಬಂಟ್ವಾಳ: ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ರವಿವಾರ ತಡರಾತ್ರಿ ನಡೆದ ಆಮ್ನಿ ಹಾಗು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

Advertisement

ಕಲ್ಲಡ್ಕ ನಿವಾಸಿ ಹಿಂದೂ ಸಂಘಟನೆ ಕಾರ್ಯಕರ್ತ ಯತಿರಾಜ್ (30) ಮೃತ ದುರ್ಧೈವಿ. ರವಿವಾರ ರಾತ್ರಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಆಮ್ನಿ ಮತ್ತು ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next