Advertisement

10ರಂದು ನ್ಯಾ. ಓಕಾ ಪ್ರಮಾಣ ವಚನ ಸ್ವೀಕಾರ

11:29 PM May 06, 2019 | Lakshmi GovindaRaj |

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಮುಂಬೈ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಅವರು ಮೇ 10ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Advertisement

ರಾಜಭವನದ ಗಾಜಿನ ಮನೆಯಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next