ನವದೆಹಲಿ:1999ರಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಗಿಲ್ ಯುದ್ಧದಲ್ಲಿ ಐತಿಹಾಸಿಕ ಗೆಲವು ಸಾಧಿಸಿರುವ ಸ್ಮರಣಾರ್ಥವಾಗಿ ದೇಶದಾದ್ಯಂತ ಕಾರ್ಗಿಲ್ ವಿಜಯೋತ್ಸವ ದಿನ ವಾದ ಗುರುವಾರ ಭಾರತೀಯ ವೀರ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು.
1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನ ಸೇನೆಯನ್ನು ಬಗ್ಗು ಬಡಿದು ಜಯ ಸಾಧಿಸಿದ್ದ ನೆನಪಿಗಾಗಿ ಪ್ರತಿವರ್ಷ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದೆ. ಇಂದು ದೇಶಾದ್ಯಂತ 19ನೇ ಕಾರ್ಗಿಲ್ ವಿಜಯೋತ್ಸವ ನಡೆಯಿತು.
ಯೋಧರ ತ್ಯಾಗ, ಬಲಿದಾನಗಳ ಬಗ್ಗೆ ಸ್ಮರಿಸಿ ವೀರ ಯೋಧರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ರಾಷ್ಟ್ರಪತಿ ರಾಮನಾಥ್ ಗೋವಿಂದ್ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ಕಾರ್ಗಿಲ್ ವಿಜಯ್ ದಿನದ ಬಗ್ಗೆ ಪ್ರತಿಯೊಬ್ಬ ಭಾರತೀಯರು ನಮ್ಮ ಯೋಧರ ಶ್ರಮ ಮತ್ತು ತ್ಯಾಗ, ಬಲಿದಾನಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡಾ ಟ್ವೀಟರ್ ನಲ್ಲಿ ಕಾರ್ಗಿಲ್ ಯುದ್ಧದಲ್ಲಿ ವೀರ ಯೋಧರ ಹೋರಾಟ ಹಾಗೂ ತ್ಯಾಗದಿಂದಾಗಿ ಜಯ ಸಿಕ್ಕಿದೆ. ನಮ್ಮ ಯೋಧರ ಧೈರ್ಯ ಸಾಹಸಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ದ್ರಾಸ್ ಯುದ್ಧ ಸ್ಮಾರಕದಲ್ಲಿ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಯೋಧರು ಹಾಗೂ ಹುತಾತ್ಮ ಯೋಧರ ಕುಟುಂಬದ ಸದಸ್ಯರು ಗೌರವ ಸಲ್ಲಿಸಿದರು.