ಹುಬ್ಬಳ್ಳಿ: ಸರ್ಕಾರ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರೈತ ಸಂಘ ಅಗಸ್ಟ್ 2 ರಂದು 13 ಜಿಲ್ಲೆಗಳ ಬಂದ್‌ಗೆ ಕರೆ ನೀಡಿದೆ.
ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಸಂಘದ ಮುಖಂಡರು ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುವುದಾಗಿ ಘೋಷಿಸಿದ್ದಾರೆ.
13 ಜಿಲ್ಲೆಗಳಾದ್ಯಂತ ಸಂಚರಿಸಿ ಬಂದ್ ಬೆಂಬಲಿಸುವಂತೆ ಸಂಘ,ಸಂಸ್ಥೆಗಳಿಗೆ ಮನವಿ ಮಾಡುವುದಾಗಿ ತಿಳಿಸಿದರು.
ಬೆಳಗಾವಿ, ಧಾರವಾಡ, ದಾವಣಗೆರೆ, ಉತ್ತರ ಕನ್ನಡ, ಕೊಪ್ಪಳ, ಬಾಗಲಕೋಟೆ, ವಿಜಯಪುರ , ಕಲಬುರಗಿ , ಬೀದರ್, ಬಳ್ಳಾರಿ ,ಗದಗ , ಹಾವೇರಿ ಮತ್ತು ಯಾದಗಿರಿ ಬಂದ್‌ಗೆ ಕರೆ ನೀಡಲಾಗಿದೆ.
ರಾಜ್ಯದ ಸಮ್ಮಿಶ್ರ ಸರಕಾರದ ವಿರುದ್ದ ತೀವ್ರ ಆಕ್ರೋಶ ಹೊರ ಹಾಕಿದ ಹೋರಾಟಗಾರರು ಕಳಸಾ ಬಂಡೂರಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಅನ್ಯಾಯವಾಗಿದೆ. ನಮಗೆ ಸರಕಾರ ಬೆಂಬಲಿಸುವುದು ಬೇಡ ನಮ್ಮ ಹೋರಾಟ ನಾವೇ ಮಾಡಿಕೊಳ್ಳುತ್ತೇವೆ ಎಂದರು.