Advertisement

Sand Mining: ಮರಳು ಮಾಫಿಯಾ ಪರಿಶೀಲಿಸಲು ತೆರಳಿದ್ದ ಅಧಿಕಾರಿಗಳನ್ನೇ ಅಟ್ಟಾಡಿಸಿ ಹಲ್ಲೆಗೈದರು

09:03 AM Apr 18, 2023 | Team Udayavani |

ಪಾಟ್ನಾ: ಅಕ್ರಮ ಮರಳುಗಾರಿಕೆಯನ್ನು ಪರಿಶೀಲಿಸಲು ಬಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ನಡೆಸಿರುವ ಘಟನೆ ಸೋಮವಾರ (ಏ.17 ರಂದು) ಮಧ್ಯಾಹ್ನ ಪಾಟ್ನಾದ ಮನೇರ್ ಪ್ರದೇಶದಲ್ಲಿ ನಡೆದಿದೆ.

Advertisement

ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ತಂಡವೊಂದು ಪಾಟ್ನಾದಿಂದ 30 ಕಿಮೀ ದೂರದಲ್ಲಿರುವ ಮನೇರ್‌ನಲ್ಲಿರುವ ಕೊಯಿಲ್‌ವಾರ್ ಸೇತುವೆಯ ಬಳಿ ಅಕ್ರಮ ಮರಳುಗಾರಿಕೆ ದಂಧೆ ನಡೆಯುತ್ತಿದೆ ಎನ್ನುವ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅದನ್ನು ಪರಿಶೀಲಿಸಲು ತೆರಳಿದೆ. ಈ ವೇಳೆ ಇಬ್ಬರು ಮಹಿಳಾ ಅಧಿಕಾರಿ ಸೇರಿ ಒಟ್ಟು ಮೂವರು ಅಧಿಕಾರಿಗಳಿಗೆ ಅಲ್ಲಿದ್ದ ಜನರು ಬೆದರಿಕೆಯನ್ನು ಹಾಕಿದ್ದಾರೆ. ಇದಾದ ಬಳಿಕ ಅವರೊಂದಿಗೆ ವಾಗ್ವಾದ ನಡೆಸಿ ಹಲ್ಲೆ ನಡೆಸಿದ್ದಾರೆ.

ಮೊದಲು ಕಲ್ಲು ತೂರಾಟ ನಡೆಸಿ, ಆ ಬಳಿಕ ಹಲ್ಲೆ ಮಾಡಿದ್ದಾರೆ. ಒಬ್ಬ ಮಹಿಳಾ ಅಧಿಕಾರಿಯನ್ನು ಕೆಳಕ್ಕೆ ಹಾಕಿ ಕೂದಲು ಹಿಡಿದು ಎಳೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಯತ್ನಿಸಿದ್ದರೂ ಅಲ್ಲಿದ್ದ ಗುಂಪು ಅಧಿಕಾರಿಗಳನ್ನು ಕಲ್ಲು, ಕೋಲಿನಿಂದ ಹಲ್ಲೆಗೈದು ಅಟ್ಟಾಡಿಸಿಕೊಂಡು ಹೊಡೆದಿದೆ.

ಅಮಿಯಾ ಕುಮಾರಿ, ಫರ್ಹೀನ್ ,ಶೋಧ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದ ಜಿಲ್ಲಾ ಗಣಿ ಅಧಿಕಾರಿ ಗೌರವ್ ಕುಮಾರ್ ಅವರ ಮೇಲೆ ಹಲ್ಲೆ ನಡೆದಿದ್ದು,ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು, 44 ಜನರ ವಿರುದ್ಧ ಕೇಸ್‌ ದಾಖಲಿಸಿ, 50 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಹಲ್ಲೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

Advertisement

Udayavani is now on Telegram. Click here to join our channel and stay updated with the latest news.

Next