ಉತ್ತರಪ್ರದೇಶ: ಸಾವು ಯಾವಾಗ, ಹೇಗೆ ಮತ್ತು ಯಾವ ರೂಪದಲ್ಲಿ ಬರುತ್ತದೆ ಎಂದು ಹೇಳಲಾಗದು, ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಆಗಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಮಕ್ಕಳಿಂದ ಹಿಡಿದು ವಯೋಮಾನದವರೂ ವಯಸ್ಸಿನ ಭೇದವಿಲ್ಲದೆ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆಘಾತಕಾರಿ ಬೆಳವಣಿಗೆಯಾಗಿದೆ.
ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಬ್ಯಾಂಕೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವ ಉದ್ಯೋಗಿಯೊಬ್ಬರು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಹೋಬಾದಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ಈ ಘಟನೆ ನಡೆದಿದ್ದು ಈ ಘಟನೆಯಿಂದ ಅಲ್ಲಿದ ಇತರ ಸಿಬಂದಿಗಳು ಆಘಾತಕ್ಕೆ ಒಳಗಾಗಿದ್ದಾರೆ.
ಮೃತ ವ್ಯಕ್ತಿಯನ್ನು ರಾಜೇಶ್ ಕುಮಾರ್ ಶಿಂಧೆ (30) ಎನ್ನಲಾಗಿದ್ದು, ಕಚೇರಿಯಲ್ಲಿ ತನ್ನ ಸಹೋದ್ಯೋಗಿಗಳ ಜೊತೆ ಕೆಲಸ ಮಾಡುತ್ತಿದ್ದ ವೇಳೆ ಇದ್ದಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಕುಳಿತಿದ್ದ ಕುರ್ಚಿಯಿಂದ ಕೆಳಗೆ ಬಿದ್ದಿದ್ದಾನೆ ಈ ವೇಳೆ ಅಲ್ಲಿದ್ದ ಇತರ ಸಹದ್ಯೋಗಿಗಳು ಆತನ ಸಹಾಯಕ್ಕೆ ಬಂದು ಜೀವ ಉಳಿಸುವ ಎಲ್ಲಾ ಪ್ರಯತ್ನ ಮಾಡಿದ್ದಾರೆ ಕೊನೆಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ ಈ ವೇಳೆ ಪರಿಶೀಲಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಾಜೇಶ್ ಹೃದಯಾಘಾತಕ್ಕೆ ಒಳಗಾಗುವ ದೃಶ್ಯ ಬ್ಯಾಂಕ್ ನಲ್ಲಿ ಅಳವಡಿಸಿದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಕುರಿತು ಹೇಳಿಕೆ ನೀಡಿರುವ ಆಸ್ಪತ್ರೆ ವೈದ್ಯರು ಕೆಲವೊಮ್ಮೆ ಕೆಲ ವ್ಯಕ್ತಿಗಳಿಗೆ ಹೆಚ್ಚಿನ ಒತ್ತಡದಿಂದಾಗಿ ಹೃದಯಾಘಾತ ಸಂಭವಿಸುವ ಸಂಭವ ಹೆಚ್ಚಾಗಿ ಇರುತ್ತವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ