Advertisement
ಹೀಗೆಂದು ಕಾಂಗ್ರೆಸ್‌ನ ಹೆಸರೆತ್ತದೇ ಆ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷ ವಾಗ್ಧಾಳಿ ನಡೆಸಿದ್ದಾರೆ.
Related Articles
Advertisement
ಇದನ್ನೂ ಓದಿ:ನಿನ್ನೆ ಬಿಜೆಪಿ ಅಭ್ಯರ್ಥಿ, ಇಂದು ಕಾಂಗ್ರೆಸ್ ಅಭ್ಯರ್ಥಿಯಿಂದ ಸಂಸದೆ ಸುಮಲತಾ ಭೇಟಿ
15 ಪ್ರತಿಪಕ್ಷಗಳಿಂದ ಬಹಿಷ್ಕಾರಕಾಂಗ್ರೆಸ್, ಎಸ್‌ಪಿ, ಆಪ್, ಸಿಪಿಐ, ಸಿಪಿಎಂ, ಡಿಎಂಕೆ, ಎಸ್‌ಎಡಿ, ಶಿವಸೇನೆ, ಎನ್‌ಸಿಪಿ, ಟಿಎಂಸಿ ಸೇರಿದಂತೆ ಸುಮಾರು 15 ಪ್ರತಿಪಕ್ಷಗಳು ಸಂವಿಧಾನ ದಿನದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. “ಸರ್ಕಾರವು ಸಂವಿಧಾನವನ್ನು ಗೌರವಿಸುತ್ತಿಲ್ಲ, ಬದಲಾಗಿ ಸಂವಿಧಾನಕ್ಕೆ ಅವಹೇಳನ ಮಾಡುತ್ತಿದೆ ಎಂಬುದನ್ನು ದೇಶಕ್ಕೆ ನೆನಪಿಸಬೇಕಿತ್ತು. ಕೇಂದ್ರದ ಬಿಜೆಪಿ ಸರ್ಕಾರವು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ತನ್ನಿಷ್ಟಬಂದಂತೆ ಕಾನೂನುಗಳನ್ನು ಅಂಗೀಕರಿಸುತ್ತಿವೆ ಮತ್ತು ಸಂಸದೀಯ ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುತ್ತಿದೆ. ಇದರ ವಿರುದ್ಧ ಪ್ರತಿಭಟನಾರ್ಥವಾಗಿ ನಾವು ಕಾರ್ಯಕ್ರಮ ಬಹಿಷ್ಕರಿಸಿದ್ದೇವೆ’ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಹೇಳಿದ್ದಾರೆ. ಪ್ರತಿಪಕ್ಷಗಳ ನಡೆಗೆ ಸ್ಪೀಕರ್ ಅಸಮಾಧಾನ
ಸಂವಿಧಾನ ದಿನದ ಕಾರ್ಯಕ್ರಮವನ್ನು ಪ್ರತಿಪಕ್ಷಗಳು ಬಹಿಷ್ಕರಿಸಿದ್ದಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂಥ ನಿಷ್ಪಕ್ಷ ಕಾರ್ಯಕ್ರಮಗಳಿಂದ ದೂರವುಳಿಯುವುದು ಪ್ರಜಾಸತ್ತೆಯ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದಿದ್ದಾರೆ.