Advertisement

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

08:11 PM Mar 28, 2024 | Team Udayavani |

ಕೋಲ್ಕತಾ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್‌ಎಫ್) ಯೋಧನೊಬ್ಬ ಕರ್ತವ್ಯದಲ್ಲಿದ್ದಾಗಲೇ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ತೆಲಂಗಾಣ ಮೂಲದ 25 ವರ್ಷದ ಯೋಧ ಗುರುವಾರ ಬೆಳಗ್ಗೆ ತನ್ನ ಸರ್ವಿಸ್ ಗನ್‌ನಿಂದಲೇ ಗುಂಡು ಹಾರಿಸಿಕೊಂಡಿದ್ದು, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಧನನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್ ಸಂಖ್ಯೆ 5 ರ ಹೊರಗೆ ನಿಯೋಜಿಸಲಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next