Advertisement

RLD; ಜನರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕೆಂದು ಎನ್‌ಡಿಎ ಸೇರ್ಪಡೆ: ಜಯಂತ್ ಚೌಧರಿ

05:20 PM Feb 12, 2024 | Team Udayavani |

ಹೊಸದಿಲ್ಲಿ:ನಾವು ಜನರಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕೆಂದು ಬಯಸಿ ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ಮಾತನಾಡಿಯೇ ಎನ್‌ಡಿಎ ಸೇರ್ಪಡೆಯಾಗುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಆರ್‌ಎಲ್‌ಡಿ ಅಧ್ಯಕ್ಷ ಜಯಂತ್ ಚೌಧರಿ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿ ”ಈ ನಿರ್ಧಾರದ ಹಿಂದೆ ಯಾವುದೇ ದೊಡ್ಡ ಯೋಜನೆ ಇರಲಿಲ್ಲ, ಕೆಲವು ಪರಿಸ್ಥಿತಿಯಿಂದಾಗಿ ನಾವು ಅಲ್ಪ ಸಮಯದೊಳಗೆ ಈ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.

ಜಯಂತ್ ಚೌಧರಿ ಅವರು ಇಂಡಿಯಾ ಮೈತ್ರಿ ಕೂಟದ ಭಾಗವಾಗಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾತುಕತೆಯನ್ನೂ ಮುಗಿಸಿದ್ದರು. ಅಜ್ಜ, ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಅತ್ಯುನ್ನತ ಭಾರತ ರತ್ನ ಪ್ರಶಸ್ತಿ ಘೋಷಿಸುತ್ತಿದ ಬೆನ್ನಲ್ಲೇ ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಾಗುವುದಾಗಿ ಸ್ಪಷ್ಟಪಡಿಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next