Advertisement

ಜೂನ್‌ 6ಕ್ಕೆ ಕೇರಳ, ಕರ್ನಾಟಕಕ್ಕೆ ಮುಂಗಾರು

02:36 AM Jun 01, 2019 | Sriram |

ಬೆಂಗಳೂರು: ಕೇರಳ ಮತ್ತು ಕರ್ನಾಟಕಕ್ಕೆ, ಒಂದೇ ದಿನ ಜೂ. 6ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾ ಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ. 6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗ ಲಿದ್ದು, ದ.ಭಾರತದಲ್ಲಿ ಶೇ. 97ರಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ಈಗಾಗಲೇ ಘೋಷಿಸಿರುವಂತೆ ಜೂ.6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ. ಈ ಬಾರಿ ವಾಡಿಕೆಯಷ್ಟು ಮಳೆಯಾಗಲಿದ್ದು, ದ.ಭಾರತದಲ್ಲಿ ಶೇ.97ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಜೂನ್‌ ಆರಂಭದಿಂದ ಸೆಪ್ಟಂಬರ್‌ ಅಂತ್ಯದವರೆಗೆ ನೈಋತ್ಯ ಮುಂಗಾರು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.8ರಷ್ಟು ಹೆಚ್ಚು ಕಡಿಮೆಯಾಗಬಹುದು ಎಂದು ಶುಕ್ರವಾರ ಬಿಡುಗಡೆ ಮಾಡಿರುವ ವರದಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್‌, ಕಳೆದ ಬಾರಿಯಂತೆ ಈ ವರ್ಷವೂ ಕೇರಳ ಮತ್ತು ಕರ್ನಾಟಕಕ್ಕೆ ಒಂದೇ ದಿನ (ಜೂ.6) ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ. ಹಿಂದೆಯೂ ಹಲವು ಬಾರಿ ಕರ್ನಾಟಕ ಮತ್ತು ಕೇರಳದ ಕರಾವಳಿಗೆ ಒಂದೇ ದಿನ ಮುಂಗಾರು ಪ್ರವೇಶಿಸಿದ ಉದಾಹರಣೆಗಳಿದ್ದು, ಈ ಬಾರಿಯೂ ಮರುಕಳಿಸುವ ಸಾಧ್ಯತೆಯಿದೆ ಎಂದರು.

ಕೆಲವೆಡೆ ಭಾರೀ ಮಳೆ
ಮುಂದಿನ ಎರಡು ದಿನಗಳು ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಕೆಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next