Advertisement

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

11:42 AM Sep 25, 2024 | Team Udayavani |

ಹೊಸದಿಲ್ಲಿ: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಗುರಿಪಡಿಸಲು ಅನುಮತಿ ನೀಡಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ರಾಜ್ಯ ಉಚ್ಚ ನ್ಯಾಯಾಲಯವು ಎತ್ತಿಹಿಡಿದಿರುವ ಕುರಿತು ರಾಜ್ಯ ಸಭಾ ಸಂಸದ, ಹಿರಿಯ ವಕೀಲ ಕಪಿಲ್ ಸಿಬಲ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ ”ರಾಜ್ಯಪಾಲರ ಕಚೇರಿ ಯನ್ನು ರಾಜ್ಯ ಸರ್ಕಾರವನ್ನು ಉರುಳಿಸಲು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಒಕ್ಕೂಟ ರಚನೆಗೆ ವಿರುದ್ಧವಾಗಿರುವುದರಿಂದ ಎಲ್ಲ ವಿರೋಧ ಪಕ್ಷಗಳು ಈ ವಿಚಾರವನ್ನು ವಿರೋಧಿಸಬೇಕು. ಈ ರೀತಿಯ ರಾಜ್ಯಪಾಲರನ್ನು ಕೆಳಗಿಳಿಸಬೇಕು ಮತ್ತು ಇದರ ವಿರುದ್ಧ ರಾಷ್ಟ್ರೀಯ ಚಳವಳಿ ನಡೆಯಬೇಕು” ಎಂದಿದ್ದಾರೆ.

ಸುಪ್ರೀಂ ಕೋರ್ಟ್ ಸಿಎಂ ವಿರುದ್ಧ ಯಾವುದೇ ಕೇಸ್ ಇದ್ದರೆ ,ರಾಜ್ಯಪಾಲರು ಮಂಜೂರಾತಿ ನೀಡಲು ಸಮರ್ಥ ಅಧಿಕಾರ ಹೊಂದಿರುತ್ತಾರೆ ಎಂದು ಹೇಳಿದೆ. ಯಾವುದೇ ಉಲ್ಲಂಘನೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯಗಳು ನಿರ್ಧರಿಸುತ್ತವೆ. ಆರೋಪಿಗಳ ಮೇಲಿನ ಆರೋಪಗಳು ನಿಜವೆಂದು ಯಾವುದೇ ಮ್ಯಾಜಿಸ್ಟ್ರೇಟ್ ವಿಚಾರಣೆಯಿಲ್ಲದೆ ರಾಜ್ಯಪಾಲರು ಹೇಗೆ ನಿರ್ಧರಿಸುತ್ತಾರೆ?. ಮೊದಲು ತನಿಖೆ ನಡೆಸಿ ನಂತರ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರ ಕ್ರಮದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next