Advertisement

Ladakh ಪ್ರವಾಸದಲ್ಲಿ ರಾಹುಲ್ ಗಾಂಧಿ; ಸ್ಟೈಲಿಶ್ ಆಗಿ ಬೈಕ್ ಸವಾರಿ

05:00 PM Aug 19, 2023 | Team Udayavani |

ಹೊಸದಿಲ್ಲಿ: ಮೊದಲ ಬಾರಿ ಲಡಾಖ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಪ್ಯಾಂಗೊಂಗ್ ಸರೋವರಕ್ಕೆ ಸ್ಟೈಲಿಶ್ ಆಗಿ ಬೈಕ್ ನಲ್ಲಿ ಹೋಗುತ್ತಿರುವ ಫೋಟೋಗಳು ವೈರಲ್ ಆಗಿವೆ.

Advertisement

ರಾಹುಲ್ ಗಾಂಧಿ ಬೈಕ್ ಓಡಿಸುತ್ತಿರುವ ಚಿತ್ರಗಳನ್ನು ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ( ಟ್ವಿಟರ್) ಹ್ಯಾಂಡಲ್ ನಲ್ಲಿ ಹಂಚಿಕೊಂಡಿದೆ. ಕೆಲವು ಚಿತ್ರಗಳನ್ನು ರಾಹುಲ್ ಗಾಂಧಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

ಪ್ಯಾಂಗಾಂಗ್ ಸರೋವರಕ್ಕೆ ಹೋಗುವ ದಾರಿಯಲ್ಲಿರುವ ಫೋಟೋ ಗಳನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ರಾಹುಲ್ ಗಾಂಧಿ, “ಇದು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದು ಎಂದು ನಮ್ಮ ತಂದೆ ಹೇಳುತ್ತಿದ್ದರು” ಎಂದು ಬರೆದಿದ್ದಾರೆ.

ಶುಕ್ರವಾರ ರಾಹುಲ್ ಗಾಂಧಿ ಅವರು ಲಡಾಖ್‌ನಲ್ಲಿ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ಫುಟ್ಬಾಲ್ ಪಂದ್ಯವನ್ನೂ ಆಡಿದ್ದರು.

Advertisement

ವರದಿಗಳ ಪ್ರಕಾರ, ರಾಹುಲ್ ಗಾಂಧಿ ತಮ್ಮ ತಂದೆ ರಾಜೀವ್ ಗಾಂಧಿಯವರ ಜನ್ಮದಿನವಾದ ಆಗಸ್ಟ್ 20 ರಂದು ಪಾಂಗಾಂಗ್ ಸರೋವರದಲ್ಲಿ ಪೂಜೆ ಸಲ್ಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next