Advertisement

ರೋಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ ಸುಪ್ರೀಂನಿಂದ ತಾತ್ಕಾಲಿಕ ತಡೆ

03:26 PM Oct 13, 2017 | Team Udayavani |

ನವದೆಹಲಿ: ಮುಂದಿನ ವಿಚಾರಣೆವರೆಗೂ ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರನ್ನು ಗಡಿಪಾರು ಮಾಡದಂತೆ ಸುಪ್ರೀಂಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Advertisement

ಮಾನವೀಯ ಮೌಲ್ಯಗಳು ನಮ್ಮ ಸಂವಿಧಾನದ ಆಧಾರ ಎಂದು ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ನಿರಾಶ್ರಿತ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ವಿಷಯಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಈ ಆದೇಶ ನೀಡಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಮುಗ್ಧ ಮಕ್ಕಳು ಮತ್ತು ಮಹಿಳೆಯರನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಮುಂದಿನ ವಿಚಾರಣೆವರೆಗೂ ರೋಹಿಂಗ್ಯಾ ಮುಸ್ಲಿಮರ ಗಡಿಪಾರು ಬಗ್ಗೆ ನಿರ್ಧಾರ ಬೇಡ ಎಂದು ತಾಕೀತು ಮಾಡಿರುವ ಸುಪ್ರೀಂಕೋರ್ಟ್ ನವೆಂಬರ್ 21ಕ್ಕೆ ವಿಚಾರಣೆ ಮುಂದೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next