Advertisement

ಮತ್ತೊಮ್ಮೆ ಮೋದಿಗೆ ಬಿಜೆಪಿ ಗೆಲ್ಲಿಸಿ

07:15 AM Mar 19, 2019 | Team Udayavani |

ತಿ.ನರಸೀಪುರ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 5 ವರ್ಷಗಳ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಕಳಂಕರಹಿತ ಆಡಳಿತ ನೀಡಿ ಜನಮೆಚ್ಚುಗೆಗೆ ಪಾತ್ರವಾಗಿರುವುದರಿಂದ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ಪ್ರಮುಖ್‌ ಡಾ.ವಾಮನಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಪಟ್ಟಣದ ವಿವೇಕಾನಂದ ನಗರದ ವೀರಶೈವ ವಿದ್ಯಾರ್ಥಿ ನಿಲಯದಲ್ಲಿ ನಡೆದ ವರುಣಾ ವಿಧಾನಸಭಾ ಕ್ಷೇತ್ರದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾಗಿ ವಿಭಿನ್ನವಾಗಿ ಆಡಳಿತವನ್ನು ನಡೆಸಿ ನೂರಕ್ಕೆ ನೂರರಷ್ಟು ಸಫ‌ಲರಾಗಿರುವುದರಿಂದ ಅವರು ಮತ್ತೊಮ್ಮೆ ದೇಶವನ್ನು ಮುನ್ನಡೆಸಲಿದ್ದಾರೆ ಎಂದರು.

ಸಾಮಾನ್ಯ ಜನರಿಗೂ ಬ್ಯಾಂಕ್‌ ಖಾತೆ ಹೊಂದುವ ಜನಧನ ಖಾತೆಯಿಂದ 93 ಸಾವಿರ ಕೋಟಿ ರೂ. ಉಳಿತಾಯವಾಗಿದೆ. ಸ್ವತ್ಛ ಭಾರತ ಅಭಿಯಾನದ ಮೂಲಕ ದೇಶದ ಸ್ವರೂಪವನ್ನು ಬದಲಿಸಿ, ಹೆದ್ದಾರಿ ಮಾರ್ಗಗಳನ್ನು ವಿಸ್ತರಣೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹುದ್ದೆಯಲ್ಲಿ ಎಚ್‌.ಡಿ.ದೇವೇಗೌಡ ಸೇರಿದಂತೆ ಮಮತಾ ಬ್ಯಾನರ್ಜಿ, ಮಾಯಾವತಿ ಮತ್ತಿತರರನ್ನು ಕಲ್ಪನೆ ಮಾಡಿಕೊಳ್ಳುವುದು ಕಷ್ಟಸಾಧ್ಯವಾಗಿದ್ದರಿಂದ ಮಹಾಘಟ್‌ಬಂಧನ್‌ಕ್ಕೆ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಹಿನ್ನಡೆಯಾಗಲಿದೆ ಎಂದು ತಿಳಿಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಎ.ಎನ್‌.ಶಿವಯ್ಯ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಪ್ರಬುದ್ಧರು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಿಜೆಪಿ ಸರ್ಕಾರದ ಯೋಜನೆಗಳು ಮತ್ತು ಪಕ್ಷ ಸಂಘಟನೆ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು. 

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ಜಿಪಂ ಮಾಜಿ ಅಧ್ಯಕ್ಷರಾದ ಕಾ.ಪು.ಸಿದ್ಧವೀರಪ್ಪ, ಕೆ.ಪಿ.ಪುಟ್ಟಬುದ್ಧಿ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಅಪರ ಆಯುಕ್ತ ಸಿದ್ಧಪ್ಪ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ನಂಜುಂಡಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ಜಿ.ರವಿಶಂಕರ್‌, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರ್ಬಳ್ಳಿ ಮೂರ್ತಿ, ಉಪಾಧ್ಯಕ್ಷ ಕಲ್ಮಳ್ಳಿ ಜಯಕುಮಾರ್‌,

Advertisement

ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ವೆಂಕಟರಮಣಶೆಟ್ಟಿ, ವಕೀಲ ಪರಮೇಶ್‌, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಚಿಕ್ಕಮಾದಪ್ಪ, ಆನಂದ, ಯುವ ಮೋರ್ಚಾ ಅಧ್ಯಕ್ಷ ಎಂ.ಮಹದೇವಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಪಿ.ಶ್ರೀಧರ, ನಂದೀಶ, ಎಂ.ಮೋಹನ, ಮುಖಂಡರಾದ ಬಿ.ಮಹೇಶ, ಆರ್‌.ಮಣಿಕಂಠರಾಜ್‌ಗೌಡ, ಸುರೇಶ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next