Advertisement

ಮತ್ತೊಮ್ಮೆ ಅವಕಾಶ ಸಿಕ್ಕರೆ ಅಭಿವೃದ್ಧಿಗೆ ಹೆಚ್ಚಿನ ಒತ್ತು : ಉಮೇಶ್ ಕತ್ತಿ

06:43 PM Sep 25, 2019 | Suhan S |

ಬೆಳಗಾವಿ:  ನನಗೆ ಮುಖ್ಯಮಂತ್ರಿ ಆಗುವ ಎಲ್ಲಾ ಅರ್ಹತೆ ಇದೆ. ಎಂಟು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಸಿಎಂ ಆದರೆ ಸಮಗ್ರ ಕರ್ನಾಟಕದ ಅಭಿವೃದ್ಧಿ ಮಾಡುತ್ತೇನೆ, ಕೃಷ್ಣ ನೀರಿನ ಉಪಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತೇನೆ , ನಾನು ರಾಜಕೀಯದಲ್ಲಿ  35 ವರ್ಷ ಕೆಲಸ ಮಾಡಿದ್ದೇನೆ.ಸಚಿವ ಸ್ಥಾನ ತಪ್ಪಿ ಹೋದದ್ದಕ್ಕೆ ಬೇಸರವಿಲ್ಲ. ಬದಲಾವಣೆ ಮಾಡಿ ನೋಡಲು ಹೈಕಮಾಂಡ್ ತೀರ್ಮಾನಿಸಿದೆ ನಾನು ಪಕ್ಷದ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ಹೇಳಿದರು.ನನ್ನ ವಿರುದ್ಧ ಷಡ್ಯಂತ್ರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಅದು ಹಣೆಬರಹದಲ್ಲಿ ಬರೆದಿರಬೇಕು ಎಂದು ಹೇಳಿದರು

ಶಾಸಕನಾಗಿ ಕ್ಷೇತ್ರದ ಕೆಲಸ ಮಾಡುತ್ತೇನೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ಬೆಳಗಾವಿ ಆಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದರು. ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ ರಾಜ್ಯ ಕಟ್ಟುತ್ತೇನೆ ಎಂದ ಅವರು ಪ್ರತ್ಯೇಕ ರಾಜ್ಯದ ಹೋರಾಟ ಹುಟ್ಟು ಹಾಕಿದ್ದು ನಾನೇ ಯಾವ ಸನ್ನುವೇಶದಲ್ಲೂ ಅನ್ಯಾಯವಾದ ಸಂದರ್ಭದಲ್ಲಿ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಇನ್ನೂ ಅಭಿವೃದ್ಧಿ ಕೆಲಸ ಸಾಕಷ್ಟು ಆಗಬೇಕಿದೆ. ಪ್ರತ್ಯೇಕ ಕೂಗು ಎಬ್ಬಿಸುವ ಸಂದರ್ಭ ಬಂದರೆ ಹೋರಾಟಕ್ಕೆ ಸಿದ್ಧ.ಅನ್ಯಾಯವಾದಾಗ ಪ್ರತಿಭಟನೆ ಮಾಡುವದು ನಮ್ಮ ಜವಾಬ್ದಾರಿ ಎಂದು ಉಮೇಶ ಕತ್ತಿ ಹೇಳಿದರು. ನೆರೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅಧಿವೇಶನ ನಡೆಸಲಾಗುತ್ತಿದೆ. ಮುಂದೆ ಬೆಳಗಾವಿಯಲ್ಲಿ ಅಧಿವೇಶನ ನಡೆಸುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next