Advertisement

Sandalwood: ಸರಳ ಪ್ರೇಮಕಥೆಯಿಂದ ಬಂತು ಗುನು ಗುನುಗು..

04:54 PM Jan 21, 2024 | Team Udayavani |

ಸಿಂಪಲ್‌ ಸುನಿ ನಿರ್ದೇಶನದ “ಒಂದು ಸರಳ ಪ್ರೇಮಕಥೆ’ ಬಿಡುಗಡೆಯ ಹಂತಕ್ಕೆ ಬಂದಿದ್ದು, ಫೆಬ್ರವರಿ 8ಕ್ಕೆ ಚಿತ್ರ ಬಿಡುಗಡೆಯಾಗಲಿದೆ. ವಿನಯ್‌ ರಾಜ್‌ಕುಮಾರ್‌ ನಾಯಕರಾಗಿರುವ ಈ ಚಿತ್ರದ ಮೊದಲ ಹಾಡು “ಗುನು ಗುನುಗು’ ಇತ್ತೀಚೆಗೆ ಬಿಡುಗಡೆಯಾಗಿದೆ.

Advertisement

ನಟ ಗಣೇಶ್‌ ಹಾಡು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. ನಾಯಕ ವಿನಯ್‌ ರಾಜ್‌ಕುಮಾರ್‌ ಕೂಡಾ ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟಿದ್ದಾರೆ.

ಚಿತ್ರ ಹಾಗೂ ಹಾಡಿನ ಬಗ್ಗೆ ಮಾತನಾಡುವ ವಿನಯ್‌, “ಗುನು ಗುನುಗು ತುಂಬಾ ಇಷ್ಟವಾದ ಹಾಡು. ವೀರ್‌ ಸಮರ್ಥ್ ಅವರು ತುಂಬಾ ಚೆನ್ನಾಗಿ ಮ್ಯೂಸಿಕ್‌ ಮಾಡಿದ್ದಾರೆ. ಸಚಿನ್‌ ಅವರು ತುಂಬಾ ಚೆನ್ನಾಗಿ ಬರೆದಿದ್ದಾರೆ. ಇದೊಂದೇ ಕೊರಿಯೋಗ್ರಾಫ್ ಸಾಂಗ್‌ ಈ ಚಿತ್ರದಲ್ಲಿ ಇರುವುದು. ಈ ಬಾರಿ ಫೈಟ್‌ ಇಲ್ಲ, ಬರೀ ಪ್ರೀತಿ. ನನ್ನದು ಅತಿಷಯ ಎಂಬ ಪಾತ್ರ. ಈ ಕಥೆಯನ್ನು ಸುನಿ ಅವರು ತುಂಬಾ ಸರಳವಾಗಿ’ ಹೇಳಿದ್ದಾರೆ ಎಂದರು.

ನಿರ್ದೇಶಕ ಸಿಂಪಲ್‌ ಸುನಿ ಮಾತನಾಡಿ, “ನಿರ್ಮಾಪಕರಾದ ರಮೇಶ್‌ ಸಿನಿಮಾಗೆ ಏನೂ ಬೇಕು ಎಲ್ಲಾ ಕೊಟ್ಟಿದ್ದಾರೆ. ಪಾತ್ರಕ್ಕೆ ಏನೂ ಬೇಕು ಎಲ್ಲವನ್ನೂ ವಿನಯ್‌ ಅವರು ಕಲಿತಿದ್ದಾರೆ. ಸ್ವಾತಿಷ್ಟ, ಮಲ್ಲಿಕಾ ಇಬ್ಬರು ಅದ್ಭುತವಾಗಿ ನಟಿಸಿದ್ದಾರೆ. ಸಚಿನ್‌ ಅದ್ಭುತವಾಗಿ ಹಾಡು ಬರೆದಿದ್ದಾರೆ. ವೀರ್‌ ಸಮರ್ಥ್ ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಸಿನಿಮಾ ನೋಡಿದ ನಂತರ ಅವರ ಸಾಮರ್ಥ್ಯ ಏನೂ ಅನ್ನೋದು ಗೊತ್ತಾಗುತ್ತದೆ’ ಎಂದರು.

ನಾಯಕಿಯರಾದ ಮಲ್ಲಿಕಾ ಸಿಂಗ್‌ ಹಾಗೂ ಸ್ವಾತಿಷ್ಠ ಕೂಡಾ ಸಿನಿಮಾ ಬಗ್ಗೆ ಮಾತನಾಡಿದರು. “ಈ ಅದ್ಭುತ ಪ್ರಾಜೆಕ್ಟ್ ಭಾಗವಾಗಿದ್ದಕ್ಕೆ ಖುಷಿ ಇದೆ. ಮೊದಲು ಈ ಪ್ರಾಜೆಕ್ಟ್‌ನಲ್ಲಿ ನಟಿಸುವಾಗ ಭಯವಾಗಿತ್ತು. ಆ ನಂತರ ಎಲ್ಲಾ ಸುಲಭವಾಗಿ ಆಯ್ತು. ನಿಮಗೆ ಈ ಚಿತ್ರ ಇಷ್ಟವಾಗುತ್ತದೆ’ ಎಂದು ಹೇಳಿಕೊಂಡರು. ಗುನು ಗುನುಗು ಹಾಡಿಗೆ ವಿನಯ್‌ ರಾಜ್‌ ಕುಮಾರ್‌ ಹಾಗೂ ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್‌ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ‌

Advertisement

ರಾಜೇಶ್‌ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ರಾಮ್‌ ಮೂವೀಸ್‌ ಬ್ಯಾನರ್‌ನಡಿ ಮೈಸೂರು ರಮೇಶ್‌ ಬಂಡವಾಳ ಹೂಡಿದ್ದಾರೆ. ಮುಂದಿನ ತಿಂಗಳ 8ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರಲಿದೆ.

 

Advertisement

Udayavani is now on Telegram. Click here to join our channel and stay updated with the latest news.

Next