Advertisement

B. Y. Vijayendra ಒಂದು ದೇಶ, ಒಂದು ಚುನಾವಣೆ ಐತಿಹಾಸಿಕ ತೀರ್ಮಾನ

10:55 PM Sep 18, 2024 | Team Udayavani |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಂದು ದೇಶ, ಒಂದು ಚುನಾವಣೆ ಪ್ರಸ್ತಾವಕ್ಕೆ ಅಂಗೀಕಾರ ನೀಡಿರುವುದು ಐತಿಹಾಸಿಕ ತೀರ್ಮಾನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

Advertisement

ದೇಶದ ಹಿತಾಸಕ್ತಿ ದೃಷ್ಟಿಯಿಂದ ಇದು ಮಹತ್ವದ ತೀರ್ಮಾನ. 1951, 1967ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆದಿತ್ತು. ಕಾನೂನು ಆಯೋಗವು 1999ರ ತನ್ನ 170ನೇ ವರದಿಯಲ್ಲಿ 5 ವರ್ಷಗಳಿಗೆ ಒಮ್ಮೆ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕುರಿತು ತಿಳಿಸಿತ್ತು ಎಂದು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿ ಆಧರಿಸಿ ಈ ಕ್ರಮ ತೆಗೆದುಕೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೊದಲ ಹಂತದಲ್ಲಿ ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವುದು ಮತ್ತು ಈ ಸಾರ್ವತ್ರಿಕ ಚುನಾವಣೆ ನಡೆದ 100 ದಿನಗಳ ಒಳಗೆ ಎರಡನೇ ಹಂತದಲ್ಲಿ ಜಿ. ಪಂ., ತಾ. ಪಂ., ಗ್ರಾ. ಪಂ., ಪುರಸಭೆ ಮತ್ತಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಉದ್ದೇಶವಿದೆ. ಇದು ಅತ್ಯಂತ ಸ್ವಾಗತಾರ್ಹ ಕ್ರಮ ಎಂದಿ¨ªಾರೆ.

Advertisement

Udayavani is now on Telegram. Click here to join our channel and stay updated with the latest news.

Next