Advertisement

ಒಂದೇ ದಿನ ಮೋದಿ,ರಾಹುಲ್‌ ದಾಂಗುಡಿ

01:38 AM Apr 08, 2019 | Sriram |

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ನಡೆಸುವ ದಿನದಂದೇ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಪ್ರಚಾರ ನಡೆಸಲು ಮುಂದಾಗಿದ್ದಾರೆ.

Advertisement

ಏಪ್ರಿಲ್‌ 13, 18ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದು, ಅದೇ ದಿನ ರಾಹುಲ್‌ ಗಾಂಧಿ ಕೂಡ ಪ್ರಚಾರ ನಡೆಸಲಿದ್ದಾರೆ. 13ಕ್ಕೆ ರಾಹುಲ್‌ ಗಾಂಧಿ ಚಿತ್ರದುರ್ಗ, ಕೋಲಾರ ಹಾಗೂ ಕೆ.ಆರ್‌. ನಗರ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ತೀರ್ಮಾನಿಸಿದ್ದರೆ, ಪ್ರಧಾನಿ ಮೋದಿ 13ಕ್ಕೆ ಮಂಗಳೂರು, ಬೆಂಗಳೂರಿನಲ್ಲಿ ಪ್ರಚಾರ ನಡೆಸುತ್ತಾರೆ.

ದಕ್ಷಿಣ ಕರ್ನಾಟಕದಲ್ಲಿ ಏ. 18ರಂದುಮೊದಲ ಹಂತದ ಚುನಾವಣೆಯಲ್ಲಿ ಮಗ್ನವಾಗಿದ್ದರೆ, ಉತ್ತರ ಕರ್ನಾಟಕ ಈ ಇಬ್ಬರು ನಾಯಕರ ಪ್ರಚಾರಕ್ಕೆ ವೇದಿಕೆಯಾಗಲಿದೆ. ಪ್ರಧಾನಿ ಮೋದಿ 18ರಂದು ಬಾಗಲಕೋಟೆ, ಚಿಕ್ಕೋಡಿಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅಂದು ರಾಹುಲ್‌ ಬೆಳಗಾವಿ, ರಾಯಚೂರು, ಕೊಪ್ಪಳ ಅಥವಾ ಬಾಗಲಕೋಟೆ ಜಿಲ್ಲೆಗಳಲ್ಲಿ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಿಯಾಂಕಾ ಬರುವುದು ಅನುಮಾನ: ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ
ಸಾಕಷ್ಟು ಸುದ್ದಿಯಾಗಿದ್ದ ಪ್ರಿಯಾಂಕಾ ವಾದ್ರಾ ರಾಜ್ಯದಲ್ಲಿ ಮೈತ್ರಿ ಪಕ್ಷಗಳ
ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವುದು ಅನುಮಾನ ಎಂದು ಹೇಳಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next