ಉತ್ತರ ಪ್ರದೇಶ: ದಟ್ಟವಾದ ಮಂಜು ಆವರಿಸಿದ ಪರಿಣಾಮ ಆಗ್ರಾ – ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ಉನ್ನಾವೊ ಬಳಿ ಸರಣಿ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಇಪ್ಪತ್ತನಾಲ್ಕು ಮಂದಿ ಗಾಯಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ದಟ್ಟದಾದ ಮಂಜಿನಿಂದಾಗಿ ಕಳಪೆ ಗೋಚರತೆಯಿಂದಾಗಿ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಾಜಕಕ್ಕೆ ಡಿಕ್ಕಿ ಹೊಡೆದೆ ಈ ವೇಳೆ ಹಿಂದಿನಿಂದ ಬಂದ ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ.
ಘಟನೆಯಿಂದ ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ ಸುಮಾರು 24 ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ ಆರು ವ್ಯಕ್ತಿಗಳನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪೊಲೀಸರು ಮತ್ತು ತುರ್ತು ಸಿಬ್ಬಂದಿ ಅಪಘಾತವಾದ ವಾಹನಗಳಿಂದ ಗಾಯಾಳುಗಳನ್ನು ಹೊರತೆಗೆಯಲು ಸಹಕರಿಸಿದ್ದಾರೆ ಅಲ್ಲದೆ ವಾಹನಗಳ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿರುವ ಪರಿಣಾಮ ಶೂನ್ಯ ಗೋಚರತೆಗೆ ಒಳಗಾವುತಿದ್ದು ಇದರಿಂದ ಅವಘಡಗಳು ಸಂಭವಿಸುತ್ತವೆ ಎಂದು ಹೇಳಲಾಗಿದೆ.
ಇದನ್ನೂ ಓದಿ: BJP: ಪಕ್ಷ ವಿರೋಧಿ ಹೇಳಿಕೆ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನದಿಂದ ಅನುಪಮ್ ಹಜ್ರಾ ವಜಾ