Advertisement

ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಗುಂಡಿನ ದಾಳಿಗೆ ಓರ್ವ ಸಾವು, ಮೂವರಿಗೆ ಗಾಯ

10:46 AM Jul 06, 2021 | Team Udayavani |

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದ ಸಂಟಾ ರೋಸಾದಲ್ಲಿ ಸೋಮವಾರ (ಜುಲೈ05) ಬೆಳಗ್ಗೆ ನಡೆದ ಗುಂಡಿನ ದಾಳಿನಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ನಡೆದಿರುವುದಾಗಿ ಸ್ಥಳೀಯ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಕ್ಸಿನ್ ಹುವಾ ಪತ್ರಿಕೆ ವರದಿ ಮಾಡಿದೆ.

Advertisement

ಇದನ್ನೂ ಓದಿ:ಶೂಟಿಂಗ್ ಗೆ ಅದಿತಿ ರೆಡಿ: ಹೊಸ ಜೋಶ್‌ ನಲ್ಲಿ ಕೆಲಸಕ್ಕೆ ಹಾಜರ್

ಮಧ್ಯರಾತ್ರಿ ಸಮಯದಲ್ಲಿ ಸಂಟಾ ರೋಸಾ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ನಾಲ್ವರು ಗುಂಡಿನ ದಾಳಿಗೆ ಒಳಗಾಗಿರುವುದು ಪತ್ತೆಯಾಗಿತ್ತು. ಘಟನೆಯಲ್ಲಿ 35 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಆತನ ಗುರುತಿನ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ.

ಗುಂಡಿನ ದಾಳಿಯಲ್ಲಿ ಸಂಟಾ ರೋಸಾ ಮೂಲದ 29 ವರ್ಷದ ಮಹಿಳೆ ಮತ್ತು 17 ವರ್ಷದ ಬಾಲಕಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, 16 ವರ್ಷದ ಬಾಲಕನ ಮೇಲೂ ಗುಂಡು ಹಾರಿಸಲಾಗಿತ್ತು. ಆದರೆ ಮೂವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನು ಬಾಹಿರವಾಗಿ ನಡೆದ ಪಟಾಕಿ ಪ್ರದರ್ಶನ ಕಾರ್ಯಕ್ರಮ ವೀಕ್ಷಿಸಲು 10ಕ್ಕೂ ಅಧಿಕ ಮಂದಿ ಗುಂಪುಗೂಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next