Advertisement

ಒಬ್ಬರು ಬಿಡುಗಡೆ-1627 ವರದಿ ಬಾಕಿ

05:21 AM May 14, 2020 | Suhan S |

ಬೀದರ: ಬೀದರ ಜಿಲ್ಲೆಯಲ್ಲಿ ಇನ್ನೂ 1627 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರುವುದು ಬಾಕಿ ಇದೆ. ಒಟ್ಟು 7522 ಜನರ ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಿದ್ದು, ಅದರಲ್ಲಿ 4841 ಮಂದಿಯದ್ದು ನೆಗೆಟಿವ್‌ ಬಂದಿದೆ. ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ- 408 ಸಂಖ್ಯೆ ರೋಗಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

Advertisement

ಜಿಲ್ಲೆಯಲ್ಲಿ ಈವರೆಗೆ ಒಟ್ಟು 42 ಪ್ರಕರಣಗಳು ವರದಿಯಾಗಿದ್ದು, ಒಂದು ಸಾವು ಸಂಭವಿಸಿದರೆ, 15 ಜನರು ಬಿಡುಗಡೆಯಾಗಿದ್ದಾರೆ. ಇನ್ನೂ 26 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಶಂಕಿತ 148 ಜನರು ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಬುಧವಾರ 84 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಹೇಲ್ತ್‌ ಬುಲೇಟಿನ್‌ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next