Advertisement

ಹಳೆಯಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ; ಓರ್ವ ಸಾವು

07:22 PM Jan 28, 2021 | Team Udayavani |

ಹಳೆಯಂಗಡಿ : ಇಲ್ಲಿನ ಹಳೆಯಂಗಡಿ ಬಳಿಯ ತೋಕೂರು ಸರಕಾರಿ ಶಾಲೆಯ ಬಳಿಯಲ್ಲಿ ಎರಡು ಬೈಕ್ ಗಳು ಪರಸ್ಪರ ಡಿಕ್ಕಿ ಹೊಡೆದು ಬೈಕ್ ಸವಾರ ರಸ್ತೆಗೆ ಬಿದ್ದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್ ನ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.

Advertisement

ಮೃತ ಪಟ್ಟ ಯುವಕನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಮತ್ತೋರ್ವ ಬೈಕ್ ಸವಾರನನ್ನು ಬಸವರಾಜ್ ಎಂದು ಗುರುತಿಸಲಾಗಿದೆ ಆತನಿಗೂ ಗಾಯಗಳಾಗಿದ್ದು ಮುಕ್ಕಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಯುತ್ತಿದ್ದಾರೆ.

ಹಳೆಂಗಡಿಯಿಂದ ಕಿನ್ನಿಗೋಳಿ ಗೆ ಖಾಸಗಿ ಬಸ್ ಸಂಚರಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ:ಅರಂತೋಡು :ಕಾಡಿನಿಂದ ಊರಿಗೆ ಬಂದ ಒಂಟಿ ಸಲಗ ; ಈ ಆನೆಯಲ್ಲಿದೆ ಒಂದು ವಿಶೇಷತೆ

Advertisement

Udayavani is now on Telegram. Click here to join our channel and stay updated with the latest news.

Next