ಐಜ್ಚಾಲ್: ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಈಶಾನ್ಯ ರಾಜ್ಯ ಮಿಜೋರಾಂನ ಸಚಿವರೊಬ್ಬರು ಹೇಳಿರುವುದು ಇದೀಗ ಚರ್ಚೆ ಗೆ ಕಾರಣವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ದೇಶಗಳು ಯೋಜನೆ ರೂಪಿಸುತ್ತಿರುವ ಈ ಸಮಯದಲ್ಲಿ ಮಿಜೋರಾಂ ಸಚಿವರ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.
ಮಿಜೋರಾಂ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ಈ ಹೇಳಿಕೆ ನೀಡಿದ್ದು, ಬಹುಮಾನಕ್ಕೆ ಅರ್ಹರಾಗಬೇಕಾದರೆ ಕನಿಷ್ಠ ಎಷ್ಟು ಮಕ್ಕಳಿರಬೇಕು ಎಂದು ತಿಳಿಸಿಲ್ಲ.
ಇದನ್ನೂ ಓದಿ:ಒಂದೇ ದಿನ 80 ಲಕ್ಷ ಜನರಿಗೆ ಲಸಿಕೆ! ಕರ್ನಾಟಕದಲ್ಲಿ 11 ಲಕ್ಷದಷ್ಟು ಮಂದಿ ಲಸಿಕೆ ಪಡೆದು ದಾಖಲೆ
ಸಣ್ಣ ಗಾತ್ರದ ಮಿಜೋ ಸಮುದಾಯಗಳಲ್ಲಿ ಜನಸಂಖ್ಯೆ ಹೆಚ್ಚಿಸುವ ಕಾರಣದಿಂದ ಸಚಿವ ರಾಬರ್ಟ್ ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ರವಿವಾರ ಸಚಿವರು ಈ ಘೋಷಣೆ ಮಾಡಿದ್ದಾರೆ, ತನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಚ್ಚು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಒಂದು ಲಕ್ಷ ನೀಡಲಾಗುವುದು. ಅದರೊಂದಿಗೆ ಟ್ರೋಫಿ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಮಿಜೋರಾಂ ನ ಕೆಲವು ಜನಾಂಗಗಳಲ್ಲಿ ಜನಸಂಖ್ಯೆ ತೀರಾ ಕಡಿಮೆಯಾಗಿದೆ, ಇದೊಂದು ಗಂಭೀರ ಸಮಸ್ಯೆ. ಸಣ್ಣ ಬುಡಕಟ್ಟು ಪಂಗಡಗಳ ಉಳಿವು ಮತ್ತು ಅಭಿವೃದ್ದಿಗೆ ಇದು ಮಾರಕವಾಗಿದೆ ಎಂದು ಸಚಿವ ರಾಬರ್ಟ್ ಹೇಳಿದ್ದಾರೆ.