ಚೆನ್ನೈ: ಚೆನ್ನೈನಿಂದ ಕೊಯಮತ್ತೂರ್‌ಗೆ 45 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್ ಚೆಂಗಲ್ಪಟ್ಟು ಜಿಲ್ಲೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ.
ಮೃತ ವ್ಯಕ್ತಿಯನ್ನು ಕನ್ಯಾಕುಮಾರಿ ನಿವಾಸಿಯಾದ ಮಣಿಕಂಠನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಸ್ಸು ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ವೇಳೆ ಪಜವೇಲಿ ಗ್ರಾಮದ ಚೆಂಗಲ್ಪಟ್ಟು ಜಿಲ್ಲೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚೆಂಗಲ್ಪಟ್ಟು ತಾಲೂಕು ಪೋಲೀಸರ ತಂಡವು ಸ್ಥಳಕ್ಕಾಗಮಿಸಿ ವ್ಯಕ್ತಿಯ ಮೃತದೇಹವನ್ನು ಮೇಲಕ್ಕೆತ್ತಿದ್ದು ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಭಾರಿ ಮಳೆಯಿಂದ ಈ ಅವಘಡ ಸಂಭವಿಸಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Cyclone: 24 ಗಂಟೆಗಳಲ್ಲಿ ಆಂಧ್ರ, ತಮಿಳುನಾಡು ಭಾಗಕ್ಕೆ ಅಪ್ಪಳಿಸಲಿದೆ ಮೈಚಾಂಗ್ ಚಂಡಮಾರುತ