ನವದೆಹಲಿ: ದೆಹಲಿಯಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದ್ದ ಒಂದು ತಿಂಗಳ ಹಸುಳೆ ಸಂಪೂರ್ಣವಾಗಿ ಗುಣಮುಖವಾಗಿ, ಆಸ್ಪತ್ರೆಯಿಂದ ಡಿಸ್ ಚಾರ್ಚ್ ಆಗಿರುವುದಾಗಿ ವರದಿಯೊಂದು ತಿಳಿಸಿದೆ.
ಇದನ್ನೂ ಓದಿ:ವೃಷಾನನ ಯೋಗಿನಿ ಮೂರ್ತಿಯನ್ನು ಭಾರತಕ್ಕೆ ಹಸ್ತಾಂತರಿಸಿದ ಇಂಗ್ಲೆಂಡ್
ಕಿವಿಯ ಸೋಂಕಿನಿಂದಾಗಿ ಒಂದು ತಿಂಗಳ ಮಗುವನ್ನು ದೆಹಲಿಯ ಮೂಲ್ ಚಂದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಮಗುವನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನ ಪರೀಕ್ಷೆ ನಡೆಸಿದಾಗ ಕೋವಿಡ್ 19 ಪಾಸಿಟಿವ್ ವರದಿ ಬಂದಿತ್ತು.
ಒಂದು ತಿಂಗಳ ಮಗು ಕೋವಿಡ್ ನಿಂದ ಸಂಪೂರ್ಣವಾಗಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದೆ. ಈ ಕುರಿತು ವಿಡಿಯೋವೊಂದನ್ನು ಆಸ್ಪತ್ರೆ ಶೇರ್ ಮಾಡಿದ್ದು, ಆರೋಗ್ಯ ಕಾರ್ಯಕರ್ತೆಯೊಬ್ಬರು ಪಿಪಿಇ ಕಿಟ್ ಧರಿಸಿ ಮಗುವನ್ನು ಆರೈಕೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.
Related Articles
ಕೋವಿಡ್ 3ನೇ ಅಲೆಯಲ್ಲಿ ದೇಶದ ವಿವಿಧ ಭಾಗದಲ್ಲಿ ಮಕ್ಕಳ ಮೇಲೂ ಹೆಚ್ಚಿನ ಪರಿಣಾಮ ಬೀರತೊಡಗಿದೆ. ಈಗಾಗಲೇ 15ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ನೀಡಲು ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ.
ಜನವರಿ 13ರವರೆಗೆ ದೇಶದಲ್ಲಿ 3 ಕೋಟಿ ಮಂದಿ ಯುವಕ, ಯುವತಿಯರು ಕೋವಿಡ್ 19 ಮೊದಲ ಡೋಸ್ ಪಡೆದಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕೂಡಲೇ ಯುವಸಮೂಹ ಕೋವಿಡ್ ಲಸಿಕೆ ತೆಗೆದುಕೊಳ್ಳಬೇಕು ಎಂದು ಸಚಿವ ಮನ್ ಸುಖ್ ಮಾಂಡವಿಯಾ ಮನವಿ ಮಾಡಿಕೊಂಡಿರುವುದಾಗಿ ವರದಿ ತಿಳಿಸಿದೆ.