Advertisement

ಮತ್ತೊಂದು ಕೋವಿಡ್-19 ಪಾಸಿಟಿವ್ ಕೇಸ್: ರಾಜ್ಯದ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆ

08:08 AM May 07, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್-19 ಸೋಂಕಿಗೆ ಒಳಗಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ.

Advertisement

ವಿಜಯಪುರದಲ್ಲಿ ಮತ್ತೋಂದು ಸೋಂಕು ಪ್ರಕರಣ ಬೆಳಕಿಗೆ ಬಂದಿದೆ. ಸೋಂಕಿತ ಸಂಖ್ಯೆ 221ರ ಸಂಪರ್ಕದಿಂದ ವಿಜಯಪುರದ 35 ವರ್ಷದ ಮಹಿಳೆಗೆ ಸೋಂಕು ಹರಡಿರುವುದು ದೃಢವಾಗಿದೆ. ಈಕೆಗೆ ವಿಜಯಪುರದ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಇಂದು 23 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಬೆಳಗಾವಿಯಲ್ಲಿ 8 ಜನರು, ಬಾಗಲಕೋಟೆಯಲ್ಲಿ 4 ಸೋಂಕಿತರು, ಮಂಡ್ಯದಲ್ಲಿ 4 ಸೋಂಕಿತರು, ಕಲಬುರಗಿಯಲ್ಲಿ ಐವರು ಸೋಂಕಿತರು, ವಿಜಯಪುರ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇದರಲ್ಲಿ 29 ಜನರು ಸಾವನ್ನಪ್ಪಿದರೆ, 354 ಜನರು ಗುಣಮುಖರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next