ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಬುಧವಾರ ಮ್ಯಾಂಚೆಸ್ಟರ್ ನಲ್ಲಿ ಆರಂಭವಾಗಲಿದೆ. ಇದಕ್ಕೂ ಮೊದಲೇ ತಂಡಕ್ಕೆ ಆಘಾತಕಾರಿ ಸುದ್ದಿ ದೊರೆತಿದೆ. ತಂಡದ ಸಹಾಯಕ ಸಿಬ್ಬಂದಿಗಳಲ್ಲಿ ಮತ್ತೋರ್ವರಿಗೆ ಕೋವಿಡ್ ಸೋಂಕು ತಾಗಿರುವುದು ದೃಢವಾಗಿದೆ.
ತಂಡದ ಮುಖ್ಯ ಕೋಚ್ ರವಿ ಶಾಸ್ತ್ರಿ ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕು ದೃಢವಾಗಿತ್ತು. ಹೀಗಾಗಿ ರವಿ ಶಾಸ್ತ್ರಿ, ಆರ್.ಶ್ರೀಧರ್, ಭರತ್ ಅರುಣ್ ಮತ್ತು ಫಿಸಿಯೋ ನಿತಿನ್ ಪಟೇಲ್ ಅವರು ಐಸೋಲೇಶನ್ ಗೆ ಒಳಗಾಗಿದ್ದರು. ಇದೀಗ ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಆಗಿದೆ.
ವಿರಾಟ್ ಕೊಹ್ಲಿ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ಬುಧವಾರ ಕೊನೆಯದಾಗಿ ಮ್ಯಾಂಚೆಸ್ಟರ್‌ನಲ್ಲಿ ಅಭ್ಯಾಸ ನಡೆಸಿದೆ. ಗುರುವಾರ ಮತ್ತೊಂದು ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಆಟಗಾರರಿಗೆ ಹೋಟೆಲ್‌ನಲ್ಲಿ ಉಳಿಯುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ:ತೆರೆ ಮೇಲೆ ‘ದಾದಾ’ ದಿನಗಳು : ಸಿದ್ಧವಾಗಲಿದೆ ಗಂಗೂಲಿ ಬಯೋಪಿಕ್
ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಡ್ರಾ ಆಗಿದ್ದರೆ ಎರಡನೇ ಮತ್ತು ನಾಲ್ಕನೇ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿತ್ತು.