Advertisement

ಒಂದು ಕುಟುಂಬಕ್ಕೆ ಒಂದು ಟಿಕೆಟ್‌ ಸೂತ್ರವೇ ಅಂತಿಮವಲ್ಲ: ಸುರ್ಜೇವಾಲಾ ಭರವಸೆ

11:38 AM Jun 03, 2022 | keerthan |

ಬೆಂಗಳೂರು: ಒಂದು ಕುಟುಂಬಕ್ಕೆ ಒಂದು ಟಿಕೆಟ್‌ ಸೂತ್ರ ಬೆಂಗಳೂರಿನಲ್ಲಿ ನಡೆಯುತ್ತಿರುವ ನವಚೈತನ್ಯ ಶಿಬಿರದಲ್ಲೂ ಚರ್ಚೆಗೆ ಬಂದಿದ್ದು, ಈ ಸೂತ್ರವೇ ಅಂತಿಮವಲ್ಲ ಎಂಬ ಸೂಚನೆ ರವಾನೆಯಾಗಿದೆ.

Advertisement

ಪಕ್ಷದಲ್ಲಿ ನಾಯಕರ ಕುಟುಂಬಗಳು ಅಥವಾ ಸಂಬಂಧಿಗಳಿಗೆ ಟಿಕೆಟ್‌ ನೀಡುವ ವಿಚಾರವಾಗಿ ಒಂದು ಕುಟುಂಬಕ್ಕೆ ಒಂದು ಟಿಕೆಟ್‌ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹಾಗೆಂದ ಮಾತ್ರಕ್ಕೆ ಒಂದು ಕುಟುಂಬದಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡುವುದೇ ಇಲ್ಲ ಎಂದಲ್ಲ. ಕುಟುಂಬದಲ್ಲಿ ಮತ್ತೊಬ್ಬರೂ ಪಕ್ಷಕ್ಕಾಗಿ 5 ವರ್ಷಗಳ ಕಾಲ ದುಡಿದಿದ್ದರೆ ಅವರಿಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ತಿಳಿಸಿದ್ದಾರೆ.

ಹೀಗಾಗಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ವಾದಕ್ಕೆ ಆರಂಭದಲ್ಲೇ ಹಿನ್ನಡೆಯಾದಂತಾಗಿದೆ. ಇದರ ಜತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ಕೆಲ ವಿಚಾರಗಳನ್ನು ಸುರ್ಜೇವಾಲಾ ಸಭೆಯಲ್ಲಿ ಹೇಳಿದ್ದಾರೆ.

ಪಕ್ಷದ ಖಾಲಿ ಹುದ್ದೆಗಳ‌ ಭರ್ತಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ 15 ದಿನದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪೂರ್ಣಗೊಳ್ಳಬೇಕು. 3 ರಿಂದ 6 ತಿಂಗಳೊಳಗೆ ಪ್ರತಿಯೊಂದು ಸಮಿತಿಗೂ ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳು ನೇಮಕವಾಗಿರಬೇಕು. ಜತೆಗೆ ಎಲ್ಲ ಸಮಿತಿಗಳಲ್ಲೂ ಶೇ.50 ರಷ್ಟು ಸ್ಥಾನ 50 ವರ್ಷದೊಳಗಿನವರಿಗೆ ಅವಕಾಶ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ

Advertisement

ಸಮನ್ವಯತೆ ಸಾಧಿಸಲು ಬ್ಲಾಕ್‌ ಹಾಗೂ ಗ್ರಾಮ ಸಮಿತಿ ನಡುವೆ ಮಂಡಲ ಸಮಿತಿ ರಚನೆಯಾಗಬೇಕು. ಕೆಪಿಸಿಸಿ ಪದಾಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ಕ್ಷೇತ್ರಗಳ ಉಸ್ತುವಾರಿ ನೀಡಲಾಗುವುದು. ಈ ಎಲ್ಲ ವಿಚಾರವಾಗಿ ನಾನು ಚರ್ಚೆ ಮಾಡಿ, ಖುದ್ದು ಮೇಲ್ವಿಚಾರಣೆ ಮಾಡುತ್ತೇನೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next