Advertisement

ಬೆಂಗಳೂರು ಹಾಗೂ ಬೆಂ. ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್

08:00 PM Jul 11, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜು.15ರಿಂದ ಒಂದು ವಾರ ಸಂಪೂರ್ಣ ಲಾಕ್ ಡೌನ್ ಗೆ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.

Advertisement

ಪ್ರಾಥಮಿಕ ಮಾಹಿತಿಯ ಪ್ರಕಾರ ಉಭಯ ಜಿಲ್ಲೆಗಳಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಜು.14ರ ರಾತ್ರಿ 8 ಗಂಟೆಯಿಂದ ಜು.23ರ ಬೆಳಗ್ಗೆವರೆಗೆ ಲಾಕ್ ಡೌನ್ ಆಗಲಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್-19 ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಅದರಲ್ಲೂ ಬಂಗಳೂರು ನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15 ಸಾವಿರ ದಾಟಿದೆ. ಹಾಗಾಗಿ ಸರಕಾರ ಕಠಿಣ ನಿರ್ಧಾರ ಕೈಗೊಂಡಿದ್ದು ಒಂದು ವಾರಗಳ ಕಾಲ ಲಾಕ್ ಡೌನ್ ಮಾಡಿ ಸೋಂಕು ನಿಯಂತ್ರಿಸುವ ಪ್ರಯತ್ನದಲ್ಲಿದೆ.

ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next